ರಾಜ್ಯ ಸರ್ಕಾರಕ್ಕೆ ತಟ್ಟಿದ ಪ್ರತಿಭಟನೆ ಬಿಸಿ: ಸುಳ್ಳು ಹೇಳಿ ಬಿಜೆಪಿ ಕೈಗೆ ಅಸ್ತ್ರವಾದ್ರಾ ಸಿಎಂ ಸಿದ್ದರಾಮಯ್ಯ?

ಬೆಂಗಳೂರು: ರಾಜ್ಯ ಸರ್ಕಾರದ ನೇಮಕಾತಿ ಪ್ರಕ್ರಿಯೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಸರ್ಕಾರದ ಅಧಿಕೃತ ಅಂಕಿಅಂಶಗಳಿಗೂ ಮತ್ತು ಸಿಎಂ ಅವರ ಸಾರ್ವಜನಿಕ ಹೇಳಿಕೆಗೂ ತಾಳೆಯಾಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಮ್ಮ ಸರ್ಕಾರದ ಅವಧಿಯಲ್ಲಿ ಈಗಾಗಲೇ 40,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಇತ್ತೀಚೆಗೆ ಹೇಳಿಕೆ ನೀಡಿದ್ದರು ಎಂದು ಬಿಜೆಪಿ ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಹೇಳಿಕೊಂಡಿದೆ.

ಕಳೆದ ಚಳಿಗಾಲದ ಅಧಿವೇಶನದಲ್ಲಿ ಖುದ್ದು ಸಿಎಂ ಅವರೇ ನೀಡಿದ ಲಿಖಿತ ಮಾಹಿತಿಯ ಪ್ರಕಾರ ನೇಮಕಾತಿ ಪೂರ್ಣಗೊಂಡ ಹುದ್ದೆಗಳು, 8,157 ಮಾತ್ರ, ನೇಮಕಾತಿ ಪ್ರಗತಿಯಲ್ಲಿರುವ ಹುದ್ದೆಗಳು 3,081 ಎಂದು ಹೇಳಿದರು. ರಡು ತಿಂಗಳ ಹಿಂದಷ್ಟೇ ಸದನದಲ್ಲಿ 8 ಸಾವಿರ ಹುದ್ದೆಗಳ ಬಗ್ಗೆ ಮಾಹಿತಿ ನೀಡಿ, ಈಗ ಇದ್ದಕ್ಕಿದ್ದಂತೆ 40 ಸಾವಿರ ಎಂದು ಹೇಳುತ್ತಿರುವುದು “ಹಸಿಹಸಿ ಸುಳ್ಳು” ಎಂದು ಟೀಕಿಸಲಾಗಿದೆ.

ಇದನ್ನೂ ಓದಿ: ಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಶೀದಿ ವಂಚನೆ ಪ್ರಕರಣ: ತನಿಖೆಗೆ ಬಿಜೆಪಿ ಆಗ್ರಹ

ಬಿಜೆಪಿ ಎಕ್ಸ್​​ ಪೋಸ್ಟ್​​ ಇಲ್ಲಿದೆ ನೋಡಿ:

ಸಿಎಂ ಹುದ್ದೆಯಲ್ಲಿದ್ದುಕೊಂಡು ತಪ್ಪು ಮಾಹಿತಿ ನೀಡುತ್ತಿರುವುದು ಸರಿಯಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ. ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ ಸರ್ಕಾರ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು