ಬೆಂಗಳೂರು: ಹೆಚ್ಚುತ್ತಿರುವ ಮೊಬೈಲ್ ವ್ಯಸನ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮಕ್ಕಳಲ್ಲಿ ಏಕಾಗ್ರತೆ ಹೆಚ್ಚಿಸುವುದು, ಸೈಬರ್ ಬೆದರಿಕೆಗಳಿಂದ ರಕ್ಷಿಸುವುದು ಮತ್ತು ಮೊಬೈಲ್ ಗೀಳಿನಿಂದ ಹೊರತರುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಜಾರಿಯಲ್ಲಿರುವ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಈ ನಿರ್ಧಾರ ಕೈಗೊಂಡಿದೆ. ಭಾರತದಲ್ಲಿ ಇಂತಹ ನಿಷೇಧ ಹೇರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಈ ನಿಷೇಧವನ್ನು ಹೇಗೆ ಜಾರಿಗೊಳಿಸಲಾಗುತ್ತದೆ (ವಯಸ್ಸಿನ ದೃಢೀಕರಣ, ಪೋಷಕರ ಜವಾಬ್ದಾರಿ ಇತ್ಯಾದಿ) ಎಂಬ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!
ನಿಷೇಧದ ಜೊತೆಗೆ ಶಾಲೆಗಳಲ್ಲಿ ಡಿಜಿಟಲ್ ಸುರಕ್ಷತೆ ಮತ್ತು ಮೊಬೈಲ್ ಬಳಕೆಯ ಅಡ್ಡಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳ ಮಾನಸಿಕ ಒತ್ತಡ ಕಡಿಮೆ ಮಾಡಲು ಪ್ರತಿ ತಾಲ್ಲೂಕಿನ ಬ್ಲಾಕ್ ರಿಸೋರ್ಸ್ ಸೆಂಟರ್ಗಳಲ್ಲಿ ಮಾನಸಿಕ ಆರೋಗ್ಯ ಸಮಾಲೋಚಕರ ನೇಮಕ. ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ದ್ರವ್ಯಗಳ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮ ಮತ್ತು ಜಾಗೃತಿ ಕೇಂದ್ರಗಳ ಸ್ಥಾಪನೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

