ಅಹಮದಾಬಾದ್: ಟಿ-20 ವಿಶ್ವಕಪ್‌ನ ಸೂಪರ್-8 ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ತಂಡದ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಭಾರತದ ಸೆಮಿಫೈನಲ್ಸ್ ಕನಸು ಇನ್ನು ಹಸಿರಾಗೇ ಉಳಿದಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲಿ ರನ್ ಗಳಿಸಲು ಪರದಾಡಿತು.

ಇದನ್ನೂ ಓದಿ: ಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು
ಕೇವಲ 83 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟದ ಪರಿಸ್ಥಿತಿಯನ್ನು ಇದ್ದಾಗ ಜಾಸನ್ ಹೋಲ್ಡರ್ ಮತ್ತು ರೊಮೆರಿಯೋ ಶೆಫರ್ಡ್ 57 ಎಸೆತಗಳಲ್ಲಿ 89 ರನ್‌ಗಳ ಜೊತೆಯಾಟ ನೀಡಿದರು. ಇದರೊಂದಿಗೆ ತಂಡ 8 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದರು.
ತಂಡದ ಪರ ರೊಮೆರಿಯೋ ಶಫರ್ಡ್ 37 ಎಸೆತಗಳಲ್ಲಿ ಅಜೇಯ 52 ರನ್, ಜಾಸನ್ ಹೋಲ್ಡರ್ 49, ಬ್ರಾಡನ್ ಕಿಂಗ್ 21 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ಲುಂಗಿ ಎಂಗಿಡಿ 3, ಕಾಗಿಸೋ ರಬಾಡ, ಕಾರ್ಬಿನ್ ಬಾಷ್ ತಲಾ 2 ವಿಕೆಟ್ ಪಡೆದರು.
ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ 16.1 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ತಂಡದ ಪರ ಅಡಿಯನ್ ಮಾಕ್ರಮ್ ಅಜೇಯ 82 ರನ್ ಗಳಿಸಿದರು. ಕ್ವಿಂಟನ್ ಡಿ ಕಾಕ್ 47 ಮತ್ತು ರಾಯನ್ ರಿಕೆಲ್ಟನ್ ಅಜೇಯ 45 ರನ್ ಗಳಿಸಿದರು. ವೆಸ್ಟ್ ಇಂಡೀಸ್ ಪರ ರೋಸ್ಟನ್ ಚೇಸ್ ಏಕೈಕ ವಿಕೆಟ್ ಪಡೆದರು.
ಇದರೊಂದಿಗೆ ಆಡಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯಿತು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

