Breaking News

ಮೋಂತಿಮಾರಿನಲ್ಲಿ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಿಂದ ‘ಉತ್ಕರ್ಷ್ 2026’ ಫೆಸ್ಟ್‌

ಬಂಟ್ವಾಳ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ವತಿಯಿಂದ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ಆಯೋಜಿಸಲಾಗಿದ್ದ ‘ಉತ್ಕರ್ಷ್2026’ ಮೊದಲ ಕಾರ್ಯಕ್ರಮವು ಸೆ.10ರಂದು ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಅತ್ಯಂತ ಸೌಹಾರ್ದಯುತ ಹಾಗೂ ವೈಭವಯುತ ವಾತಾವರಣದಲ್ಲಿ ಜರುಗಿತು.ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಹಾಗೂ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶೋಭಾಯಮಾನವಾಗಿ ಚಾಲನೆ ನೀಡಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಮೋಂತಿಮಾರು ಇದರ ಆಡಳಿತ ಸಹ ಮೊಕ್ತೇಸರರು ಹಾಗೂ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಮುಕುಂದ ಪ್ರಭು ವಹಿಸಿದ್ದರು. ಅಧ್ಯಕ್ಷೀಯ ನುಡಿಗಳನ್ನಾಡಿದ ಅವರು, ಶ್ರೀರಾಮ ವಿದ್ಯಾಕೇಂದ್ರವು ನೀಡುತ್ತಿರುವ ಸಂಸ್ಕಾರಯುತ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಕುರಿತು ಹೆಮ್ಮೆಯ ಮಾತುಗಳನ್ನಾಡಿ, ಪರೀಕ್ಷೆ ಹಾಗೂ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿರುವ ಯುವಜನತೆಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಭಾಗವಹಿಸಿದ್ದ ದೇವಕಿ (ನಿವೃತ್ತ ಮುಖ್ಯೋಪಾಧ್ಯಾಯರು), ಸುರೇಶ್ ರೈ ಇರಾ (ಶ್ರೀರಾಮ ಪದವಿ ವಿಭಾಗದ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯದರ್ಶಿ), ಧೀರಜ್ ಬಲ್ಲೆಕೋಡಿ (ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು), ಅಶೋಕ್ ನಾಡಾಜೆ (ಮೋಂತಿಮಾರು ದೇವಸ್ಥಾನದ ವ್ಯವಸ್ಥಾಪಕರು), ಇವರೆಲ್ಲರೂ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹದ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ವೇದಿಕೆಯಲ್ಲಿ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಕಾರ್ಯಕ್ರಮದ ಸಂಯೋಜಕಿ  ನವಿತ ಮತ್ತು ಸಹಸಂಯೋಜಕಿ ಅನನ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜು ವಿದ್ಯಾರ್ಥಿಗಳು ಆಯ್ಕೆ

ಕಾಕಾರ್ಯಕ್ರಮದಲ್ಲಿ ಭಾಗವಗಿಸಿ ಅಥಿತಿಗಳನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಯತಿರಾಜ್ ಪೆರಾಜೆ ಅವರು ಸ್ವಾಗತಿಸಿದರು. ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ್ ಅವರು ‘ಉತ್ಕರ್ಷ್ 2026’ ಫೆಸ್ಟ್‌ನ ಉದ್ದೇಶ ಹಾಗೂ ವಿದ್ಯಾರ್ಥಿಗಳ ಕೌಶಲ್ಯ ವೃದ್ಧಿಯಲ್ಲಿ ಇದರ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಕಾಂ ವಿದ್ಯಾರ್ಥಿ ಲಿಖಿತ್ ನಾಯಕ್ ಪ್ರಾರ್ಥಿಸಿದರೆ, ಅಂತಿಮ ಬಿಸಿಎ ವಿದ್ಯಾರ್ಥಿನಿ ತ್ರಿಶಾ ಇಡೀ ಸಭಾ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರೂಪಿಸಿದರು. ದ್ವಿತೀಯ ಬಿಎ ವಿದ್ಯಾರ್ಥಿನಿ ಅಕ್ಷತ ಲಕ್ಷ್ಮೀ ಧನ್ಯವಾದ ಸಮರ್ಪಿಸಿದರು. ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಈ ಕಲಾ ಮತ್ತು ಕೌಶಲ್ಯ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *