ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಪ್ರಾಂತ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡವು ಭರ್ಜರಿ ಜಯ ಗಳಿಸಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ.ಈ ಪಂದ್ಯಾವಳಿಯ ೧೯ ವರ್ಷದೊಳಗಿನ (U-19) ತರುಣಿಯರ ವಿಭಾಗದಲ್ಲಿ ಭಾಗವಹಿಸಿದ್ದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರು ಅತ್ಯುತ್ತಮ ಪ್ರದರ್ಶನ ನೀಡಿದರು.
ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ ಈ ಕಬಡ್ಡಿ ಕೂಟದಲ್ಲಿ ಕಠಿಣ ಸವಾಲುಗಳನ್ನು ಮೆಟ್ಟಿ ನಿಂತ ಸಂಸ್ಥೆಯ ಬಾಲಕಿಯರ ತಂಡವು ಅಂತಿಮ ಹಂತದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದೆ. ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ವಿಜೇತ ತಂಡದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

