ಕಲ್ಲಡ್ಕ: ಹೈದರಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ.
19ರ ವಯೋಮಾನದ ತರುಣ ಬಾಲಕಿಯರ ವಿಭಾಗ. ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಕೂಟ. ಹೈದರಾಬಾದ್‌ನಲ್ಲಿ ನಡೆದ ಪಂದ್ಯಾಟದಲ್ಲಿ ಎದುರಾಳಿ ತಂಡಗಳನ್ನು ಮಣಿಸಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.
ಇದನ್ನೂ ಓದಿ: ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ಸ್ಕೇಟಿಂಗ್: ಶ್ರೀರಾಮ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
ಬಾಲಕಿಯರ ಈ ಸಾಧನೆಗೆ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

