ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಸಂಸ್ಕಾರ ಶಿಬಿರ ‘ಉತ್ಥಾನ’ ಉದ್ಘಾಟನೆ: ಸಂಸ್ಕಾರ ಬೆಳೆಸಿಕೊಳ್ಳಲು ಅತಿಥಿಗಳ ಕರೆ!

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ “ಉತ್ಥಾನ” ದ ಉದ್ಘಾಟನಾ ಸಮಾರಂಭವು ಬುಧವಾರ (ಅಕ್ಟೋಬರ್ 7) ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಗಣ್ಯ ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಅವಕಾಶಗಳನ್ನು ಬಳಸಿಕೊಂಡು ಜೀವನ ರೂಪಿಸಿಕೊಳ್ಳಿ:

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2026ರ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪುರಸ್ಕೃತರಾದ ರೂಪಶ್ರೀ ವರ್ಕಾಡಿ, “ಇಂತಹ ಶಿಬಿರಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಲು ಪೂರಕವಾಗಿವೆ. ಜೀವನದಲ್ಲಿ ದೊರೆಯುವ ಪ್ರತಿಯೊಂದು ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡಾಗ, ಅದು ನಮ್ಮ ಮುಂದಿನ ಭವಿಷ್ಯಕ್ಕೆ ದಾರಿದೀಪವಾಗುತ್ತದೆ” ಎಂದು ವಿದ್ಯಾರ್ಥಿನಿಯರಿಗೆ ಪ್ರೇರಣಾದಾಯಕವಾಗಿ ಕರೆ ನೀಡಿದರು.

ಇದನ್ನೂ ಓದಿ: ಅಕ್ಟೋಬರ್ 1ರಿಂದ ಸಬ್ಸಿಡಿ LPGಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ಗ್ರಾಹಕರಿಗೆ ಮಹತ್ವದ ಸೂಚನೆ

ಆತ್ಮವಿಶ್ವಾಸ ಮತ್ತು ಸಂಸ್ಕಾರ ಬೆಳೆಸುವ ವೇದಿಕೆ:

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಮಾತನಾಡಿ, “ರಾಷ್ಟ್ರೀಯ ಸಂಸ್ಕಾರ ಶಿಬಿರ ‘ಉತ್ಥಾನ’ವು ವಿದ್ಯಾರ್ಥಿನಿಯರ ಜ್ಞಾನ, ಪ್ರತಿಭೆ, ಆತ್ಮವಿಶ್ವಾಸ ಹಾಗೂ ಸಾಂಸ್ಕೃತಿಕ ಸಂಸ್ಕಾರವನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ” ಎಂದು ಹೇಳಿದರು.

ಸಮಾರಂಭದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯ ನಾಗೇಶ್ ಕಲ್ಲಡ್ಕ, ರಾಷ್ಟ್ರ ಸೇವಿಕಾ ಸಮಿತಿಯ ಹೊಯ್ಸಳ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ. ಕಮಲ ಪ್ರಭಾಕರ್ ಭಟ್, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹಾಗೂ ಪ್ರಾಂಶುಪಾಲರಾದ ವಸಂತ್ ಬಲ್ಲಾಳ್ ಉಪಸ್ಥಿತರಿದ್ದರು.

ಉಪನ್ಯಾಸಕಿ ನಯನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಚೈತನ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ಶೈಲಿನಿ ಸ್ವಾಗತಿಸಿ, ಉಪನ್ಯಾಸಕಿ ಶೋಭಾ ವಂದಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *