Breaking News

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಮುಲ್ಕಿ: ಅನುದಾನಿತ ಕೆಪಿಎಸ್‌ಕೆ ಸ್ಮಾರಕ ಪ್ರೌಢಶಾಲೆ, ಪಂಜಿನಡ್ಕ (ಮುಲ್ಕಿ) ಇಲ್ಲಿ ಆಗಸ್ಟ್ 19 ರಂದು ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಲಡ್ಕದ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬ್ರಾಹ್ಮಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಲಯದ ವಿದ್ಯಾರ್ಥಿನಿಯರಾದ ತನುಶ್ರೀ ಮತ್ತು ಹರ್ಷಿಕಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.

ಇದನ್ನೂ ಓದಿ: ಅಂಬಿಕಾ ಸಂಸ್ಥೆಗಳಲ್ಲಿ ಮಾಜಿ ಸೈನಿಕರ ಸಮ್ಮಿಲನ-ಭೋಜನಕೂಟ: ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ವಿದ್ಯಾರ್ಥಿನಿಯರ ಈ ಹೆಮ್ಮೆಯ ಸಾಧನೆಗೆ ಶ್ರೀ ರಾಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *