ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ 2026ರ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇವುಗಳ ಜಂಟಿ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ 10ನೇ ತರಗತಿ ವಿದ್ಯಾರ್ಥಿನಿ ಬೃಂದಾ ಆರ್.ಕೆ, ತೃತೀಯ ಬಹುಮಾನ 9ನೇ ತರಗತಿ ವಿದ್ಯಾರ್ಥಿನಿ ಮಾನ್ವಿ ಶೆಟ್ಟಿ, ಪ್ರೋತ್ಸಾಹಕ ಬಹುಮಾನ 10ನೇ ತರಗತಿ ವಿದ್ಯಾರ್ಥಿ ಕೆ. ಆದಿತ್ಯ ಭಂಡಾರ್ಕರ್ ನೀಡಲಾಗಿದೆ. ಸಾಧಕ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ಹಾಗೂ ಬಹುಮಾನಗಳನ್ನು ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ “ಸನಾತನಾ ಈ ಚೇತನಾ” ಗೀತೆಯ ಧ್ವನಿ, ದೃಶ್ಯಾವಳಿ ಬಿಡುಗಡೆ

ಅಂತರರಾಷ್ಟ್ರೀಯ ಮಟ್ಟದ ಜಾಗೃತಿ ದಿನಾಚರಣೆಯ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಹಾಗೂ ಪ್ರಭಾರ ಮುಖ್ಯೋಪಾಧ್ಯಾಯಿನಿಯಾದ ಗಾಯತ್ರಿ ಎಸ್. ಅವರು ಪತ್ರಿಕಾ ಪ್ರಕಟಣೆಯ ಮೂಲಕ ಶ್ಲಾಘಿಸಿ, ಶುಭ ಹಾರೈಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *