ಬೆಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯಡಿ 2001 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆರಂಭಗೊಂಡ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾದ ಸಹಕಾರಿ ಸಂಘ ನಿಯಮಿತವು ರಜತ ಮಹೋತ್ಸವ ಸಂಭ್ರಮಾಚರಣೆಯಲ್ಲಿದ್ದು, ಈ ಪ್ರಯುಕ್ತ ಜು.12 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಳಕು ಆಯೋಜಿಸಿದೆ.
ಕ್ಯಾಂಪ್ಕೋ ಮಂಗಳೂರು ಅಧ್ಯಕ್ಷರೂ ಆಗಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾದ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸತೀಶ್ಚಂದ್ರ ಎಸ್.ಆರ್. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗಡ, ರಾಜಪುರ ಸಾರಸ್ವತ ಸಮಾಜ ಬೆಂಗಳೂರು ಅಧ್ಯಕ್ಷ ಕೇಶವ ಎಲ್. ಪಾಟ್ಕರ್, ಮಾಚೋಹಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ಟ್ರಸ್ಟಿ ನಾಗೇಂದ್ರ ಕಾಮತ್ ಡಿ., ಜನಸೇನಾ ವಿಶ್ವಸ್ಥ ಮಂಡಲಿ ಚನ್ನೇನಹಳ್ಳಿಯ ವಿಶ್ವಸ್ಥ ಶಂಕರ ನಾಯಕ್ ಬಿ., ಕೆನರಾ ಬ್ಯಾಂಕ್‌ನ ವಿಶ್ರಾಂತ ಪ್ರಧಾನ ವ್ಯವಸ್ಥಾಪಕ ರಾಮಕೃಷ್ಣ ನಾಯಕ್, ನ್ಯಾಯವಾದಿ ಚಂದ್ರಶೇಖರ್ ಎನ್., ಮಣಿಪಾಲ್ ಆಸ್ಪತ್ರೆತಯ ವೈದ್ಯ ಡಾ|ಎಸ್.ವಿದ್ಯಾಧರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬೆಳಗ್ಗೆ 10 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 11.15ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ರಿಂದ ಪ್ರೊ.ಕೃಷ್ಣೇಗೌಡ ಮತ್ತು ತಂಡದಿಂದ ನಗೆ ಹಬ್ಬ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಉಪಹಾರ ಹಾಗೂ ಭೋಜನದ ವ್ಯವಸ್ಥೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


