ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಪತ್ರಗಳ ಮರು ಎಣಿಕೆ ಪ್ರಕ್ರಿಯೆಯು ಇಂದು (ಮೇ 2) ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಣಿಕಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ಸೂಚನೆಯ ಮೇರೆಗೆ ಚುನಾವಣಾ ಆಯೋಗವು ಅಂಚೆ ಮತಪತ್ರಗಳ ಮರು ಎಣಿಕೆಗೆ ಮುಂದಾಗಿದೆ. ನಗರದ ಐಡಿಎಸ್‌ಜಿ (IDSG) ಕಾಲೇಜಿನ ಮೊದಲ ಮಹಡಿಯ ಕೊಠಡಿ ಸಂಖ್ಯೆ 12 ರಲ್ಲಿ ಎಣಿಕೆ ಕಾರ್ಯ ನಡೆಯುತ್ತಿದೆ.

ಎಣಿಕಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ನಿಷೇಧಾಜ್ಞೆ ಇರಲಿದೆ. ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಶೋಧ ಬಳಿಕ 16 ವರ್ಷದ ಬಾಲಕಿ ಶವ ಪತ್ತೆ

ಚುನಾವಣಾ ಅಧಿಕಾರಿಗಳು ಮತ್ತು ಬಂದೋಬಸ್ತ್‌ಗೆ ನಿಯೋಜಿತರಾದ ಸಿಬ್ಬಂದಿಯನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

