ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅಂಚೆ ಮತಗಳ ಮರುಎಣಿಕೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪದಡಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ನ್ಯಾಯಾಲಯವು ತಡೆ ನೀಡಿದೆ.
ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠವು ಮಂಗಳವಾರ ಡಿ.ಎನ್. ಜೀವರಾಜ್ ವಿರುದ್ಧದ ಪ್ರಕರಣದ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ. ರಾಜಕೀಯ ಒತ್ತಡಗಳಿಗೆ ಮಣಿದು ಪೊಲೀಸರು ಎಫ್‌ಐಆರ್ ದಾಖಲಿಸಬಾರದು. ಈ ರೀತಿಯ ಕ್ರಮಗಳು ಕಾನೂನು ಪ್ರಕ್ರಿಯೆಯ ದುರುಪಯೋಗ ಎಂದು ಹೈಕೋರ್ಟ್ ಕಟುವಾಗಿ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: Political: ಅಬಕಾರಿ ಇಲಾಖೆಯಲ್ಲಿ ಬಹುಕೋಟಿ ಹಗರಣ: ಬಿಜೆಪಿ ಆರೋಪ
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸಂದರ್ಭದಲ್ಲಿ ಮತಪತ್ರಗಳಲ್ಲಿ ತಿದ್ದುಪಡಿ ಮಾಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜೀವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ.
ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

