Breaking News

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಕಲ್ಲಡ್ಕ: ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ಆಗಸ್ಟ್ 22 ರಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ೧೯ರ ವಯೋಮಾನದ ಬಾಲಕಿಯರ (ತರುಣ ವಿಭಾಗ) ತಂಡವು ಅಮೋಘ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಈ ಕ್ರೀಡಾಕೂಟವನ್ನು ವಿದ್ಯಾಭಾರತಿ ಕರ್ನಾಟಕ ಹಾಗೂ ಶ್ರೀರಾಮ ಪ್ರೌಢ ಶಾಲೆ ಕಲ್ಲಡ್ಕ ಜಂಟಿಯಾಗಿ ಆಯೋಜಿಸಿದ್ದವು. ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ತಂಡಕ್ಕೆ ಶಾಲಾಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *