ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರಿಗಾಗಿ “ಪಾಲಕ ಪ್ರಬೋಧನ್” ಎಂಬ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಪುತ್ತೂರಿನ ತೆಂಕಿಲ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್, “ಪ್ರೌಢಾವಸ್ಥೆಯಲ್ಲಿರುವ ಮಕ್ಕಳ ಮನಸ್ಥಿತಿಯನ್ನು ಅರ್ಥೈಸಿಕೊಂಡು ಅವರನ್ನು ಸರಿಯಾದ ಹಾದಿಯಲ್ಲಿ ನಿಭಾಯಿಸುವುದು ಅತ್ಯಂತ ಸೂಕ್ಷ್ಮ ವಿಷಯ. ಈ ಹಂತದಲ್ಲಿ ಪಾಲಕರ ಜವಾಬ್ದಾರಿ ಹೆಚ್ಚಿದ್ದು, ಮಕ್ಕಳೊಂದಿಗೆ ಪ್ರೀತಿ ಮತ್ತು ಸೌಹಾರ್ದತೆಯಿಂದ ವ್ಯವಹರಿಸಬೇಕು,” ಎಂದು ಮಾರ್ಗದರ್ಶನ ನೀಡಿದರು.
ಇದನ್ನೂ ಓದಿ: ಆರ್‌ಆರ್‌ಬಿ ಜೆಇ ಹುದ್ದೆಗಳ ಸಂಖ್ಯೆ ಹೆಚ್ಚಳ: 4,029 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ವಿವರ ಇಲ್ಲಿದೆ
ಉಪನ್ಯಾಸದ ನಂತರ ಪೋಷಕರೊಂದಿಗೆ ಉಪಯುಕ್ತ ಸಂವಾದ ಕಾರ್ಯಕ್ರಮ ನೆರವೇರಿತು. ಪೋಷಕರು ತಮ್ಮ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾನಿಕೇತನದ ಪ್ರಮುಖರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

