ದೆಹಲಿ : ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವು ಸ್ಫೋಟಕ ಹಂತಕ್ಕೆ ತಲುಪಿರುವ ಬೆನ್ನಲ್ಲೇ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಹತ್ವದ ಸಲಹೆಯನ್ನು ನೀಡಿದೆ. ಮುಂದಿನ 48 ಗಂಟೆಗಳ ಕಾಲ ಭಾರತೀಯರು ತಾವು ಇರುವ ಸ್ಥಳದಲ್ಲೇ ಇರಬೇಕು ಮತ್ತು ಅನಗತ್ಯವಾಗಿ ಸಂಚರಿಸಬಾರದು ಎಂದು ಸೂಚಿಸಲಾಗಿದೆ.
ಇರಾನ್‌ನ ವಿವಿಧ ನಗರಗಳಲ್ಲಿರುವ ಭಾರತೀಯರು ಮುಂದಿನ ಎರಡು ದಿನಗಳ ಕಾಲ ಮನೆಯೊಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ತಿಳಿಸಲಾಗಿದೆ. ಇರಾನ್‌ಗೆ ಪ್ರಯಾಣಿಸಲು ಯೋಜಿಸಿರುವ ಭಾರತೀಯರು ತಮ್ಮ ಪ್ರಯಾಣವನ್ನು ಸದ್ಯಕ್ಕೆ ಮುಂದೂಡುವಂತೆ ಸರ್ಕಾರ ಸೂಚಿಸಿದೆ.

ಯಾವುದೇ ತುರ್ತು ಸಂದರ್ಭದಲ್ಲಿ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಅಲ್ಲಿರುವ ಭಾರತೀಯರು ರಾಯಭಾರ ಕಚೇರಿಯಲ್ಲಿ ತಮ್ಮ ವಿವರಗಳನ್ನು ಇಂದೀಕರಿಸಲು (Update) ಕೇಳಿಕೊಳ್ಳಲಾಗಿದೆ.
ಇದನ್ನೂ ಓದಿ: ಕಾಸರಗೋಡು: ಸೋಡಾ, ತಂಪು ಪಾನೀಯಗಳ ಬೆಲೆ ಏರಿಕೆ; ಇಂದಿನಿಂದಲೇ ಹೊಸ ದರ ಜಾರಿ!

ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ನೀಡಿರುವ ಅಂತಿಮ ಎಚ್ಚರಿಕೆ ಮತ್ತು ಗಡುವು ಮುಗಿಯುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಮಿಲಿಟರಿ ಕ್ರಮಗಳು ನಡೆಯುವ ಸಾಧ್ಯತೆ ಇದೆ. ಈ ಉದ್ವಿಗ್ನ ವಾತಾವರಣದಲ್ಲಿ ಭಾರತೀಯ ಪ್ರಜೆಗಳ ಪ್ರಾಣಕ್ಕೆ ಯಾವುದೇ ಅಪಾಯವಾಗದಂತೆ ತಡೆಯಲು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


