Breaking News

ಅಬುಧಾಬಿಯಿಂದ ದೆಹಲಿಗೆ ಬಂದಿಳಿದ ಮೊದಲ ವಿಮಾನ; ದುಬೈನಲ್ಲಿ ಸಿಲುಕಿದವರಿಗೆ ಬಿಡುಗಡೆ ಭಾಗ್ಯ!

ದುಬೈ: ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ರದ್ದಾಗಿದ್ದ ಅಂತರಾಷ್ಟ್ರೀಯ ವಿಮಾನ ಸಂಚಾರ ಈಗ ಹಂತಹಂತವಾಗಿ ಪುನರಾರಂಭಗೊಳ್ಳುತ್ತಿದೆ. ಅಬುಧಾಬಿಯಿಂದ ಹೊರಟ ಮೊದಲ ಏರ್ ಇಂಡಿಯಾ ವಿಮಾನವು ಇಂದು ಬೆಳಿಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸೀಮಿತ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿದೆ. ಇದರಿಂದಾಗಿ ಕಳೆದ 3-4 ದಿನಗಳಿಂದ ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದ ನೂರಾರು ಕನ್ನಡಿಗರು ಸೇರಿದಂತೆ ಭಾರತೀಯ ಪ್ರಯಾಣಿಕರಲ್ಲಿ ಆಶಾಭಾವನೆ ಮೂಡಿದೆ. ಅಬುಧಾಬಿಯಿಂದ ಬಂದ ವಿಮಾನದಲ್ಲಿ ಸರಿಸುಮಾರು 180ಕ್ಕೂ ಹೆಚ್ಚು ಪ್ರಯಾಣಿಕರು ಭಾರತಕ್ಕೆ ಮರಳಿದ್ದಾರೆ. ತಾಯ್ನಾಡಿಗೆ ಮರಳಿದ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Advertisement

ಇದನ್ನೂ ಓದಿ:ಇರಾನ್ ಬೆಂಬಲಿಸಿ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ: ಟ್ರಂಪ್ ಎಚ್ಚರಿಕೆಯಿಂದ ಪಾಕ್ ಪ್ರಧಾನಿ ಕಂಗಾಲು!

ವಿದೇಶಾಂಗ ಸಚಿವಾಲಯವು ಅರಬ್ ರಾಷ್ಟ್ರಗಳ ವಿಮಾನಯಾನ ಪ್ರಾಧಿಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಸುರಕ್ಷಿತ ವಾಯುಮಾರ್ಗಗಳನ್ನು (Safe Air Corridors) ಬಳಸಿ ಹೆಚ್ಚಿನ ವಿಮಾನಗಳನ್ನು ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ. ದುಬೈನಿಂದ ಬೆಂಗಳೂರು ಮತ್ತು ಮಂಗಳೂರಿಗೆ ಬರಬೇಕಿರುವ ವಿಮಾನಗಳು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ವೇಳೆಗೆ ಹೊರಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು