Breaking News

ಬಂಟ್ವಾಳ: ಸೆಪ್ಟೆಂಬರ್ 11ರಿಂದ 14ರವರೆಗೆ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನ

ಬಂಟ್ವಾಳ: ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಬಂಟ್ವಾಳದ ಸುಳ್ಳಮಲೆ ಗುಹಾ ತೀರ್ಥ ಸ್ನಾನವು ಸೆಪ್ಟೆಂಬರ್ 11ರಿಂದ 14ರವರೆಗೆ ನಡೆಯಲಿದೆ.

ಭಾದ್ರಪದ ಶುಕ್ಲ ಚೌತಿಯವರೆಗೆ ನಡೆಯುವ ಈ ತೀರ್ಥಸ್ನಾನಕ್ಕೆ ಪೂರ್ವಭಾವಿಯಾಗಿ ಸೋಣ ಅಮಾವಾಸ್ಯೆಯಂದು ಬಿದಿರಿನ ‘ಕೇರ್ಪು’ (ಏಣಿ) ಇಡುವ ಸಂಪ್ರದಾಯ ನೆರವೇರಲಿದೆ. ಬಳಿಕ ಅರಸು ಶ್ರೀ ಗುಡ್ಡೆಚಾಮುಂಡಿ ಹಾಗೂ ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಸಲ್ಲಿಸಿದ ನಂತರ ಭಕ್ತಾದಿಗಳಿಗೆ ಗುಹಾ ತೀರ್ಥ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ತೀರ್ಥಸ್ನಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಬರುವ ಮೂಲಕ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಧಾರ್ಮಿಕ ಸಂಪ್ರದಾಯವನ್ನು ಕಾಪಾಡಬೇಕಾಗಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಗೌರಿ-ಗಣೇಶ ಹಬ್ಬಕ್ಕೆ ‘ಕೆಎಸ್‌ಆರ್‌ಟಿಸಿ’ ಬಿಗ್ ಆಫರ್: ಬೆಂಗಳೂರಿನಿಂದ 2,400 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ
ಸುಳ್ಳಮಲೆ ಗುಹಾ ತೀರ್ಥದ ಒಳಭಾಗದಲ್ಲಿ ಛಾಯಾಗ್ರಹಣ (Photos) ಮತ್ತು ವೀಡಿಯೋ ಚಿತ್ರೀಕರಣವನ್ನು (Videos) ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ. ಮಾಣಿ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿ ಅವರು ಭಕ್ತಾದಿಗಳಲ್ಲಿ ಈ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *