ಸುಳ್ಯ: ಭಾರತೀಯ ಮಜ್ದೂರ್ ಸಂಘ (BMS) ಸಂಯೋಜಿತ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ (ರಿ.) ನೇತೃತ್ವದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೂರಾರು ಆಟೋ ಚಾಲಕರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸುಳ್ಯ ತಾಲೂಕಿನ ನಗರ ಪ್ರದೇಶ ಸೇರಿದಂತೆ ಪ್ರಮುಖ ಗ್ರಾಮಗಳ ಆಟೋ ಚಾಲಕರು ಒಗ್ಗೂಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ಗಮನ ಸೆಳೆದಿದ್ದಾರೆ.
ಸುಳ್ಯ ನಗರ, ಕಲ್ಲುಗುಂಡಿ, ಪಂಜ, ಎಡಮಂಗಲ, ಗುತ್ತಿಗಾರು, ಸುಬ್ರಹ್ಮಣ್ಯ, ಹರಿಹರ, ಕಲ್ಮಕಾರು, ಜಾಲ್ಸೂರು, ಕುಕ್ಕುಜಡ್ಕ ಹಾಗೂ ಪೆರಾಜೆ ಘಟಕಗಳಿಂದ ನೂರಾರು ಆಟೋ ಚಾಲಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಅಂಬಿಕಾ ಸಂಸ್ಥೆಗಳಲ್ಲಿ ಮಾಜಿ ಸೈನಿಕರ ಸಮ್ಮಿಲನ-ಭೋಜನಕೂಟ: ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಆಟೋ ಚಾಲಕರು ಎದುರಿಸುತ್ತಿರುವ ವಿವಿಧ ತೊಂದರೆಗಳು, ಚಾಲಕರ ಶ್ರೇಯೋಭಿವೃದ್ಧಿ ಹಾಗೂ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ., ಕೋಶಾಧಿಕಾರಿ ರವಿ ಎಸ್., ಸಂಘಟನಾ ಕಾರ್ಯದರ್ಶಿ ಸುಂದರ್ ಪೆರಾಜೆ, ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಮಾಜಿ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

