ಸುಳ್ಯ: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಯುವಕರಿಬ್ಬರು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಭೀಕರವಾಗಿ ಡಿಕ್ಕಿ ಹೊಡೆದ ಘಟನೆ ಸುಳ್ಯ-ಬೈತಡ್ಕ ರಸ್ತೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಅಪಘಾತದಲ್ಲಿ ಎರಡೂ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.


ಇಬ್ಬರು ಯುವಕರು ಕಂಠಪೂರ್ತಿ ಮದ್ಯ ಸೇವಿಸಿ ಮದ್ಯದ ಅಮಲಿನಲ್ಲಿ ವೇಗವಾಗಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಬೈತಡ್ಕ ಬಳಿ ಈ ವೇಗದ ಕಾರು, ನಿಯಮದಂತೆ ನಿಧಾನವಾಗಿ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ಕಾರುಗಳ ಮುಂಭಾಗ ಸಂಪೂರ್ಣ ನುಜ್ಜುನುಜ್ಜಾಗಿದೆ.
ಇದನ್ನೂ ಓದಿ: ಪುತ್ತೂರು: ರೈಲು ಡಿಕ್ಕಿಯಾಗಿ ಯುವಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಇದು ಅಪಘಾತವಲ್ಲ, ಆತ್ಮಹತ್ಯೆ!
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ, ಕಾರಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರಗೆ ತೆಗೆದಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರಿನಲ್ಲಿದ್ದ ಯುವಕರು ಎದ್ದು ನಿಲ್ಲಲೂ ಆಗದಷ್ಟು ಪಾನಮತ್ತರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ಯ ಸೇವಿಸಿ ವಾಹನ ಚಲಾಯಿಸಿದ ಯುವಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

