Breaking News

ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ನೆರವು ಕಡಿಮೆ: ಭಾಗೀರಥಿ ಮುರುಳ್ಯ

Sullia MLA Bhagirathi Murulya inaugurated the rooms of Deraje Government Higher Primary School in Kadaba taluk.

ಕಡಬ: ತಾಲೂಕಿನ ದೇರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಥಮ ಬಾರಿಗೆ ಶಾಸಕಿಯಾಗಿ ರಂಗಮಂದಿರ ಉದ್ಘಾಟನೆ ಮಾಡಿದ್ದನ್ನು ನೆನಪಿಸಿಕೊಂಡು, ಈಗ ಕಟ್ಟಡ ಉದ್ಘಾಟನೆಗೆ ಬಂದಿರುವುದು ಸಂತಸ ತಂದಿದೆ ಎಂದರು.

ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ನೆರವು ಕಡಿಮೆ ಇರುವುದರಿಂದ, ಊರಿನ ಜನರ ಸಹಕಾರ ಮತ್ತು ದಾನಿಗಳ ಕೊಡುಗೆ ಮುಖ್ಯ. ಶಿಕ್ಷಣವು ಕೇವಲ ಉದ್ಯೋಗಕ್ಕಾಗಿ ಅಲ್ಲ, ಜ್ಞಾನಕ್ಕಾಗಿ ಇರಬೇಕು. ಮಕ್ಕಳು ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆಯಂತಹ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಇತರರಿಗೆ ಉದ್ಯೋಗ ನೀಡುವ ಬಗ್ಗೆ ಯೋಚಿಸಬೇಕು ಎಂದರು.

Advertisement

ಇದನ್ನೂ ಓದಿ: ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳು ಬಹಿರಂಗ: ಆರ್. ಅಶೋಕ್

ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಲು ಹಿರಿಯರ ಮಾರ್ಗವನ್ನು ಅನುಸರಿಸಬೇಕು. ಶಿಕ್ಷಣದ ಜೊತೆಗೆ ಸಮಾಜದಲ್ಲಿ ಬದುಕುವ ಕೌಶಲ್ಯಗಳನ್ನು ಮಕ್ಕಳಿಗೆ ಕಲಿಸಬೇಕು ಎಂದು ಶಾಸಕರು ಒತ್ತಿ ಹೇಳಿದರು. ದೇಶದ ಅಭಿವೃದ್ಧಿ, ಶಿಕ್ಷಣ, ದೇವಸ್ಥಾನ ಮತ್ತು ಊರಿನ ಅಭಿವೃದ್ಧಿ ಮುಖ್ಯ  ರಾಜಕೀಯವನ್ನು ಬದಿಗಿಟ್ಟು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಶಾಸಕರು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಲಾ ವಿಧ್ಯಾರ್ಥಿಗಳು ನೂತನ ಕೊಠಡಿಗಾಗಿ ಸಲ್ಲಿಸಿದ  ಮನವಿಯನ್ನು ಸ್ವೀಕರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು