ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ಆಗಸ್ಟ್ 1ರ ಶನಿವಾರದಂದು ಮೈಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ’ (ವಿವೇಕ ಸ್ಮಾರಕ) ವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.
1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪನ್ನು ಚಿರಸ್ಥಾಯಿಯಾಗಿಸಲು ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಯುವಜನರಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಮೌಲ್ಯಗಳನ್ನು ಬಿತ್ತಲು ಇದು ಸಹಕಾರಿಯಾಗಲಿದೆ.
1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಸವಿನೆನಪಿನಲ್ಲಿ ಈ ಪವಿತ್ರ ಕೇಂದ್ರವನ್ನು ನಿರ್ಮಿಸಲಾಗಿದೆ. ಯುವಕರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ಸುಸಜ್ಜಿತ ತರಗತಿ ಕೊಠಡಿಗಳು ಮತ್ತು ಬೃಹತ್ ಗ್ರಂಥಾಲಯ ವ್ಯವಸ್ಥೆ ಮಾಡಲಾಗಿದೆ. ಮಾನಸಿಕ ನೆಮ್ಮದಿ ಹಾಗೂ ದೈಹಿಕ ಆರೋಗ್ಯ ವೃದ್ಧಿಗಾಗಿ ವಿಶಾಲವಾದ ಧ್ಯಾನ ಮತ್ತು ಯೋಗ ಹಾಲ್ ನಿರ್ಮಿಸಲಾಗಿದೆ.
ಇದನ್ನೂ ಓದಿ: ಮೈಸೂರು ದಸರಾ-2026 ಅಕ್ಟೋಬರ್ 11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ
ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳು, ತತ್ತ್ವಗಳು ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಲುಪಿಸಲು ಮತ್ತು ಯುವಶಕ್ತಿಯನ್ನು ಸಬಲೀಕರಣಗೊಳಿಸಲು ಈ ಕೇಂದ್ರ ಮುಂಚೂಣಿಯಲ್ಲಿ ನಿಲ್ಲಲಿದೆ.

