ಅಹಮದಾಬಾದ್: ಕ್ರಿಕೆಟ್ ಲೋಕದ ಮಹತ್ವದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ, ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಿ ಬೃಹತ್ ಮೊತ್ತವನ್ನು ಪೇರಿಸಬೇಕಿದೆ. ಸಂಜೆಯ ಪಂದ್ಯವಾಗಿರುವುದರಿಂದ ಎರಡನೇ ಇನ್ನಿಂಗ್ಸ್ನಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಇರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನ್ಯೂಜಿಲೆಂಡ್ ಚೇಸಿಂಗ್ ಮಾಡಲು ಮುಂದಾಗಿದೆ.
ಪಿಚ್ ಬ್ಯಾಟಿಂಗ್ಗೆ ಪೂರಕವಾಗಿರುವುದರಿಂದ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ವೀಲ್ ಚೇರ್ ಹಿಡಿದ ಮನೆ ಯಜಮಾನ; ಕಾಡುತ್ತಿರುವ ಅನಾರೋಗ್ಯ, ಚಿಕಿತ್ಸೆಗೆ ಬೇಕಿದೆ ಸಹಾಯ ಹಸ್ತ
ಈಗಾಗಲೇ ವರದಿಯಾದಂತೆ ಇದು ಕೆಂಪು ಮತ್ತು ಕಪ್ಪು ಮಣ್ಣಿನ ಮಿಶ್ರಣವಿರುವ ಪಿಚ್ ಆಗಿದ್ದು, ಬ್ಯಾಟರ್ಗಳಿಗೆ ಹೆಚ್ಚು ರನ್ ಗಳಿಸಲು ಸಹಕಾರಿಯಾಗಲಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

