ತಮಿಳುನಾಡು ಚುನಾವಣೆ 2026: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಅಣ್ಣಾಮಲೈ ಹೆಸರಿಲ್ಲ!

ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಹೆಸರು ಮೊದಲ ಪಟ್ಟಿಯಲ್ಲಿ ಇಲ್ಲದಿರುವುದು ಕುತೂಹಲ ಮೂಡಿಸಿದೆ. ಆದರೆ, ತಾವು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಎಲ್ಲ 27 ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.

ತಮಿಳುನಾಡಿನ ಒಟ್ಟು 234 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 23, 2026 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ. ಎಐಎಡಿಎಂಕೆ ನೇತೃತ್ವದ ಎನ್​ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಒಟ್ಟು 27 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ ಈ ಬಾರಿ ತಮಿಳುನಾಡಿನಲ್ಲಿ ಭ್ರಷ್ಟಾಚಾರ ಮತ್ತು ಡಿಎಂಕೆ ಸರ್ಕಾರದ ವೈಫಲ್ಯಗಳನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ಚುನಾವಣಾ ಕಣಕ್ಕಿಳಿದಿದೆ.

ಇದನ್ನೂ ಓದಿ: ನಾನು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3,000 ರೂ., ಪುರುಷರಿಗೆ 2,000 ರೂ. ನೀಡುತ್ತೇನೆ: ಯತ್ನಾಳ್

ಪ್ರಮುಖ ಅಭ್ಯರ್ಥಿಗಳು:

ಡಾ. ತಮಿಳ್ ಇಸಾಯಿ ಸೌಂದರ್ ರಾಜನ್: ಮೈಲಾಪುರ ಕ್ಷೇತ್ರದಿಂದ ಸ್ಪರ್ಧೆ.

ಎಲ್. ಮುರುಗನ್ (ಕೇಂದ್ರ ಸಚಿವ): ಅವಿನಾಶಿ (SC ಮೀಸಲು) ಕ್ಷೇತ್ರದಿಂದ ಸ್ಪರ್ಧೆ.

ವಾನತಿ ಶ್ರೀನಿವಾಸನ್: ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಸ್ಪರ್ಧೆ.

ನೈನಾರ್ ನಾಗೇಂದ್ರನ್: ಸತ್ತೂರು ಕ್ಷೇತ್ರದಿಂದ ಸ್ಪರ್ಧೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು