ಕರೀಂನಗರ : ಗಣೇಶ ಮೂರ್ತಿಗಳ ಜಲ ವಿಸರ್ಜನೆಗಾಗಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಬೃಹತ್ ಪ್ರತಿಭಟನೆಯಿಂದಾಗಿ ತೆಲಂಗಾಣದ ಚಿಂತಕುಂಟ ಕಾಲುವೆ ಬಳಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಗಣೇಶ ವಿಸರ್ಜನೆಗೆ ಕಾಲುವೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹಬ್ಬದ ಸಂದರ್ಭದಲ್ಲೂ ಗಣೇಶ ವಿಸರ್ಜನೆಗೆ ಸರಿಯಾದ ನೀರಿನ ವ್ಯವಸ್ಥೆ ಮಾಡದೆ ಭಕ್ತರ ಭಾವನೆಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಂಗಪ್ರವೇಶ ಮಾಡಿದ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದು, ಸ್ಥಳೀಯ ಪೊಲೀಸ್ ಠಾಣೆಗಳಿಗೆ ರವಾನಿಸಿದರು.
ಇದನ್ನೂ ಓದಿ; ಇರಾನ್ ಮೇಲೆ ಧ್ವಂಸಕಾರಿ ದಾಳಿಯ ಎಚ್ಚರಿಕೆ ನೀಡಿದ ಇಸ್ರೇಲ್: ವಿಶ್ವಸಂಸ್ಥೆಯಲ್ಲಿ ರಾಯಭಾರಿ ಡ್ಯಾನಿ ಡ್ಯಾನನ್ ಆಕ್ರೋಶ
ಇಲ್ಲಿದೆ ನೋಡಿ ವಿಡಿಯೋ:
#WATCH | Telangana: A tense situation erupted at Chintakunta canal in Karimnagar after BJP and Hindu organisations staged a protest demanding that the government release water for Ganesh idol immersion.
The protesters raised slogans against the government. Police detained them… pic.twitter.com/qDowGygp2P
— ANI (@ANI) September 21, 2026
ಈ ಘಟನೆಗೆ ಸಂಬಂಧಿಸಿದ ವೀಡಿಯೋ ತುಣುಕುಗಳನ್ನು ಕರೀಂನಗರ ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದೆ.
ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

