Karkala : ಕುದುರೆಮುಖ ಸೇರಿ ಈ ವನ್ಯಜೀವಿ ವಲಯಗಳಲ್ಲಿ ಚಾರಣಕ್ಕೆ ನಿರ್ಬಂಧ

ಕಾರ್ಕಳ : ಕಾಡ್ಗಿಚ್ಚಿನ ಸೀಸನ್ ಸಮೀಪಿಸುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯ ಹಲವಾರು ಅರಣ್ಯ ಮತ್ತು ವನ್ಯಜೀವಿ ಪ್ರದೇಶಗಳಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದೊಳಗಿನ ಚಾರಣಗಳಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಜ.14ರಿಂದ ಮುಂದಿನ ಆದೇಶದವರೆಗೆ ಈ ಚಾರಣ ಮಾರ್ಗಗಳಿಗೆ ಪ್ರವೇಶವನ್ನು ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : Bangalore: ‘ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ’, ಡಿ.ಕೆ.ಶಿ ಪೋಸ್ಟ್

ನಿರ್ಬಂಧದ ಬಗ್ಗೆ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದು ಮತ್ತು ಎಲ್ಲಾ ಅಧಿಸೂಚಿತ ಚಾರಣ ವಲಯಗಳಲ್ಲಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಗಂಗಡಿಕಲ್ಲು, ಕುದುರೆಮುಖ ಶಿಖರ, ಕುರಿಂಜಲ್, ವಾಲಿಕುಂಜ (ಎಸ್‌ಕೆ ಬಾರ್ಡರ್), ವಾಲಿಕುಂಜ (ಕರ್ವಾಶೆ), ನರಸಿಂಹ ಪರ್ವತ (ಕಿಗ್ಗಾ), ಮಲಂದೂರು, ಕೊಡಚಾದ್ರಿ (ವಾಲೂರು), ಕೊಡಚಾದ್ರಿ (ವಾಲೂರು) ಇತ್ಯಾದಿ ಟ್ರೆಕ್ಕಿಂಗ್ ಮಾರ್ಗಗಳಲ್ಲಿ ಪ್ರವೇಶವನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಮತ್ತು ಸಾಹಸ ಪ್ರಿಯರು ಅರಣ್ಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮತ್ತು ಅಗ್ನಿ ದುರಂತದ ಸಮಯದಲ್ಲಿ ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು