ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಲ್ಲುತೂರಾಟದ ಘಟನೆಯೊಂದು ಕೋಮು ಸಂಘರ್ಷಕ್ಕೆ ನಾಂದಿ ಹಾಡಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂದೂ ವ್ಯಕ್ತಿಯೊಬ್ಬರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಬೆನ್ನಲ್ಲೇ ಎರಡು ಗುಂಪುಗಳ ನಡುವೆ ಭಾರಿ ವಾಕ್ಸಮರ ನಡೆದಿದೆ. ನಗರದ ಉಪ್ಪಳ್ಳಿ ಬಡಾವಣೆಯಲ್ಲಿರುವ ಹಿಂದೂ ವ್ಯಕ್ತಿಯೊಬ್ಬರ ಮನೆಗೆ ಅಪರಿಚಿತ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಈ ಘಟನೆಯನ್ನು ಖಂಡಿಸಿ ಭಜರಂಗದಳದ ಕಾರ್ಯಕರ್ತರು ತಕ್ಷಣವೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು.

ಇದನ್ನೂ ಓದಿ : ಮದ್ಯಪಾನ ಮಾಡಿದ್ದ 10ನೇ ತರಗತಿಯ ವಿದ್ಯಾರ್ಥಿ 7ನೇ ಮಹಡಿಯಿಂದ ಬಿದ್ದು ಸಾವು

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಹೆಚ್ಚಿನ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉದ್ವಿಗ್ನಗೊಂಡಿದ್ದ ಗುಂಪುಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದ್ದು, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಸಾರ್ವಜನಿಕರು ಶಾಂತಿ ಕಾಪಾಡಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

