Breaking News

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ! ನಟಿ ಜೊತೆ ಅನೈತಿಕ ಸಂಬಂಧ ಆರೋಪ

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ಸುಂದರ ಸಂಸಾರದಲ್ಲಿ ಬಿರುಕು ಮೂಡಿದೆ. ಸುಮಾರು 27 ವರ್ಷಗಳ ಸುದೀರ್ಘ ದಾಂಪತ್ಯದ ನಂತರ ಸಂಗೀತಾ ಅವರು ವಿಚ್ಛೇದನಕ್ಕೆ (Divorce) ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ಅವರು ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಪತ್ನಿ ಸಂಗೀತಾ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿಯೇ ದಂಪತಿಗಳ ನಡುವೆ ಕಳೆದ ಕೆಲವು ಸಮಯದಿಂದ ಮನಸ್ತಾಪ ಇತ್ತು ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ನಡೆದ ವಿಜಯ್ ಅವರ ತಮಿಳುಗ ವೆಟ್ರಿ ಕಳಗಂ (TVK) ಪಕ್ಷದ ಸಮಾವೇಶ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಂಗೀತಾ ಕಾಣಿಸಿಕೊಂಡಿರಲಿಲ್ಲ. ಇದು ಈ ವಿಚ್ಛೇದನದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಸಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಇಷ್ಟು ವರ್ಷಗಳ ಮಾದರಿ ದಾಂಪತ್ಯದಲ್ಲಿ ಈ ರೀತಿ ಬಿರುಕು ಮೂಡಿರುವುದು ಕಾಲಿವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ.

Advertisement

ಇದನ್ನೂ ಓದಿ: ಅಖಿಲಾ ಪಜಿಮಣ್ಣು ವಿಚ್ಛೇದನದ ಹಿಂದಿನ ಅಸಲಿ ಸತ್ಯ ಏನು? ಮೌನ ಮುರಿದ ‘ಕನ್ನಡ ಕೋಗಿಲೆ’

ಈ ಸುದ್ದಿಯ ಬಗ್ಗೆ ನಟ ವಿಜಯ್ ಅಥವಾ ಅವರ ಕುಟುಂಬದ ಕಡೆಯಿಂದ ಇನ್ನು ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬುತ್ತಿದ್ದು, ಅಭಿಮಾನಿಗಳು ಇದು ಕೇವಲ ವದಂತಿಯಾಗಿರಲಿ ಎಂದು ಆಶಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು