Breaking News

“ಅವರೇ ನಮ್ಮ ಪಾಲಿಗೆ ಹೈಕಮಾಂಡ್”: ಯತೀಂದ್ರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತು ಎಂಎಲ್‌ಸಿ ಹಾಗೂ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ನೀಡಿರುವ ಪ್ರತಿಕ್ರಿಯೆ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು, “ನನ್ನ ತಂದೆಯೇ ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಹೈಕಮಾಂಡ್‌ನಿಂದ ಈ ಬಗ್ಗೆ ಸ್ಪಷ್ಟ ಸಂದೇಶ ಸಿಕ್ಕಿದೆ, ನಾಯಕತ್ವ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪರೋಕ್ಷವಾಗಿ ತಿರುಗೇಟು ಡಿಕೆ ಶಿವಕುಮಾರ್ “ಯತೀಂದ್ರ ಅವರು ಹೇಳುತ್ತಿದ್ದಾರೆ ಎಂದರೆ ಅವರೇ ನಮ್ಮ ಪಾಲಿಗೆ ಹೈಕಮಾಂಡ್ ಇದ್ದಂತೆ. ಅವರು ದೊಡ್ಡ ನಾಯಕರು, ಅವರ ಮಾತುಗಳನ್ನು ನಾವು ಗೌರವದಿಂದ ಸ್ವೀಕರಿಸುತ್ತೇವೆ” ಎಂದು ಮಾರ್ಮಿಕವಾಗಿ ಟೀಕಿಸಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ಅವರು, ಅಧಿಕೃತವಾಗಿ ಹೈಕಮಾಂಡ್ ಹೇಳಬೇಕಾದ ವಿಷಯಗಳನ್ನು ಮುಖ್ಯಮಂತ್ರಿಯವರ ಪುತ್ರ ಹೇಳುತ್ತಿರುವುದಕ್ಕೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Advertisement

ಇದನ್ನೂ ಓದಿ: ರಾಜಕೀಯದಲ್ಲಿ ಮಹಿಳೆಯರು ಸೈಡ್-ಡಿಶ್: ಮೋಟಮ್ಮ ಹೇಳಿಕೆಗೆ ಬಿಜೆಪಿ ಆಕ್ರೋಶ

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ‘ಅಧಿಕಾರ ಹಂಚಿಕೆ’ (Power Sharing) ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಸಿದ್ದರಾಮಯ್ಯ ಅವರು 2.5 ವರ್ಷ ಮತ್ತು ಡಿ.ಕೆ. ಶಿವಕುಮಾರ್ ಅವರು ಉಳಿದ 2.5 ವರ್ಷ ಸಿಎಂ ಆಗಲಿದ್ದಾರೆ ಎಂಬ ಚರ್ಚೆ ಪಕ್ಷದ ಒಳಗೆ ನಡೆಯುತ್ತಿದೆ. ಆದರೆ ಸಿದ್ದರಾಮಯ್ಯ ಬಣವು “ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ” ಎಂದು ಪದೇ ಪದೇ ಹೇಳುತ್ತಿರುವುದು ಡಿ.ಕೆ.ಶಿ ಬಣಕ್ಕೆ ಇಕ್ಕಟ್ಟು ತಂದಿದೆ. ಡಿ.ಕೆ. ಶಿವಕುಮಾರ್ ಅವರ ಈ ‘ಹೈಕಮಾಂಡ್’ ವ್ಯಂಗ್ಯವು ಪಕ್ಷದ ಒಳಗಿನ ಆಂತರಿಕ ಭಿನ್ನಮತವನ್ನು ಮತ್ತೊಮ್ಮೆ ಬೀದಿಗೆ ತಂದಿದೆ. ಸದ್ಯಕ್ಕೆ ಹೈಕಮಾಂಡ್ ಮೌನವಾಗಿದ್ದರೂ, ಸ್ಥಳೀಯ ಚುನಾವಣೆಗಳ ನಂತರ ಈ ‘ಕುರ್ಚಿ’ ಜಟಾಪಟಿ ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು