Breaking News

ಯಶ್ ಅಭಿಮಾನಿಗಳಿಗೆ ‘ಟಾಕ್ಸಿಕ್’ ಬಿಗ್ ಶಾಕ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್ ಇಲ್ಲ; ಹೊಸ ದಿನಾಂಕ ಘೋಷಣೆ!

ಬೆಂಗಳೂರು: ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಬಿಡುಗಡೆಯನ್ನು ಚಿತ್ರತಂಡ ಅಧಿಕೃತವಾಗಿ ಮುಂದೂಡಿದೆ. ಮಾರ್ಚ್ 19, 2026 ರಂದು ಯುಗಾದಿ ಹಬ್ಬದ ಪ್ರಯುಕ್ತ ರಿಲೀಸ್ ಆಗಬೇಕಿದ್ದ ಈ ಚಿತ್ರ ಈಗ ಜೂನ್ ತಿಂಗಳಿಗೆ ಶಿಫ್ಟ್ ಆಗಿದೆ. ಪ್ರಸ್ತುತ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ವಾತಾವರಣ ಮತ್ತು ಜಾಗತಿಕ ಅಸ್ಥಿರತೆಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿನಿಮಾದ ಬಿಡುಗಡೆಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: “ನಟಿಯರು ಭೋಗದ ವಸ್ತು ಅಲ್ಲ”; ಸಾಮಾಜಿಕ ಜಾಲತಾಣಗಳಲ್ಲಿನ ಅಶ್ಲೀಲ ಕಮೆಂಟ್‌ ವಿರುದ್ಧ ಗುಡುಗಿದ ನಟಿ ಸಪ್ತಮಿ ಗೌಡ

Advertisement

‘ಟಾಕ್ಸಿಕ್’ ಸಿನಿಮಾವು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿದ್ದು, ವಿಶ್ವದಾದ್ಯಂತ ಏಕಕಾಲಕ್ಕೆ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಯುದ್ಧದ ಭೀತಿಯಿಂದಾಗಿ ವಿಮಾನಯಾನ ಮತ್ತು ವಿತರಣಾ ಜಾಲದಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಅಡ್ಡಿಯಾಗಿದೆ.ಯಶ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಈಗ ಹೊಸ ದಿನಾಂಕವನ್ನು ಘೋಷಿಸಿದ್ದು, ‘ಟಾಕ್ಸಿಕ್’ ಸಿನಿಮಾ ಜೂನ್ 4, 2026 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು