ಉಪ್ಪಿನಂಗಡಿ: ಲಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ; ನೀರಕಟ್ಟೆಯಲ್ಲಿ ಸವಾರ ದಾರುಣ ಸಾವು!

ಉಪ್ಪಿನಂಗಡಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏಪ್ರಿಲ್ 29ರಂದು ನಡೆದಿದೆ.

ಬುಧವಾರದಂದು ಸವಾರನು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ನೀರಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಲಾರಿಯ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಸವಾರನು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಸವಾರನ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು