ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ದಾರುಣ ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಜಲ ದುರಂತವೊಂದು ಸಂಭವಿಸಿದೆ. ಉಜಿರೆಯ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ನೇತ್ರಾವತಿ ನದಿಯಲ್ಲಿ ಮುಳುಗಿ ಕರುಣಾಜನಕವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಶ್ರೀಪೂರ್ಣ ಅವರು ಉಜಿರೆಯ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕಲ್ಮಂಜ ಗ್ರಾಮದ ಪಜಿರಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಗೆ ತನ್ನ ಏಳು ಮಂದಿ ಸ್ನೇಹಿತರ ಗುಂಪಿನೊಂದಿಗೆ ಶ್ರೀಪೂರ್ಣ ಅವರು ಈಜಾಡಲು ತೆರಳಿದ್ದರು.

ಇದನ್ನೂ ಓದಿ:ಕಡಲ್ಕೊರೆತಕ್ಕೆ ಶಾಶ್ವತ ಬ್ರೇಕ್: ಕರಾವಳಿಯ ಮೂರು ಜಿಲ್ಲೆಗಳಿಗೆ ತಲಾ 100 ಕೋಟಿ ರೂ. ಮಂಜೂರು; ಡಿಸಿ ದರ್ಶನ್ ಎಚ್.ವಿ

ನೋಡನೋಡುತ್ತಿದ್ದಂತೆ ನದಿಯ ನೀರಿನ ಆಳ ಹಾಗೂ ಸುಳಿಗೆ ಸಿಲುಕಿದ ಶ್ರೀಪೂರ್ಣ ಅವರು ನೀರಿನಲ್ಲಿ ಮುಳುಗಲಾರಂಭಿಸಿದ್ದಾರೆ. ತಕ್ಷಣವೇ ಸ್ನೇಹಿತರು ಮತ್ತು ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ಅಷ್ಟರಲ್ಲೇ ಅವರು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (Dharmasthala Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ನದಿಗಿಳಿಯುವಾಗ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು