ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ: ಜೀಪ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ತೇಕ್ಕಟ್ಟೆ ಮುಖ್ಯ ವೃತ್ತದಲ್ಲಿ ಮಂಗಳವಾರ (ಜೂನ್ 2) ತಡರಾತ್ರಿ ಜೀಪ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ತೇಕ್ಕಟ್ಟೆ ಸಮೀಪದ ಮಾನೂರು ಜಟ್ಟಿಗೇಶ್ವರ ದೈವಸ್ಥಾನದ ಬಳಿಯ ಕೋಟಿ ಪೂಜಾರಿ ಮನೆಯ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ

ಮಂಗಳವಾರ ತಡರಾತ್ರಿ ಗಣೇಶ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೇಕ್ಕಟ್ಟೆ ಮುಖ್ಯ ವೃತ್ತದ ರಸ್ತೆಯನ್ನು ದಾಟುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಜೀಪ್‌ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ರಕ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ತೇಕ್ಕಟ್ಟೆ ಜಂಕ್ಷನ್‌ನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದು ಸ್ಥಳೀಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು