ತುಮಕೂರು: ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಸೀಟ್ ಹಿಡಿಯುವ ಭರದಲ್ಲಿ ಬಸ್‌ನ ಹಿಂದಿನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಇಡೀ ಘಟನೆಯ ದೃಶ್ಯವು ನಿಲ್ದಾಣದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರಲ್ಲಿ ನಡುಕ ಹುಟ್ಟಿಸಿದೆ.
ತುಮಕೂರು-ಪಾವಗಡ ಮಾರ್ಗದ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಪ್ಲಾಟ್‌ಫಾರ್ಮ್‌ಗೆ ಬರುವ ಮೊದಲೇ ಸೀಟ್ ಹಿಡಿಯಲು ಮುಗಿಬಿದ್ದಿದ್ದಾರೆ.ಚಲಿಸುತ್ತಿದ್ದ ಬಸ್‌ನ ಕಿಟಕಿಯ ಮೂಲಕ ಬ್ಯಾಗ್ ಹಾಕಿ ಸೀಟ್ ಕಾಯ್ದಿರಿಸಲು ಪ್ರಯತ್ನಿಸಿದ ವಿದ್ಯಾರ್ಥಿನಿ, ಸಮತೋಲನ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಆಕೆಯ ಕಾಲು ಬಸ್‌ನ ಹಿಂದಿನ ಚಕ್ರದಡಿಗೆ ಸಿಲುಕಿದೆ.

ಇದನ್ನೂ ಓದಿ: ಮಡಿಕೇರಿ ಸಮೀಪ ಕಾಫಿತೋಟದಲ್ಲಿ ಹುಲಿ ಪ್ರತ್ಯಕ್ಷ: ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
ಇಲ್ಲಿದೆ ನೋಡಿ ವಿಡಿಯೋ:
Lack of Crowd Control at KSRTC Bus Stand Leads to Horrific Student Injury in Tumkur
An unfortunate incident occurred at the Tumkur Bus Stand, where a 17-year-old student named Harshita sustained a serious injury while attempting to board a bus. Harshita, who is pursuing her… pic.twitter.com/VjWPZ3ETSw
— Karnataka Portfolio (@karnatakaportf) March 25, 2026
ಅಪಘಾತದಲ್ಲಿ ವಿದ್ಯಾರ್ಥಿನಿಯ ಕಾಲು ಸಂಪೂರ್ಣವಾಗಿ ಜಖಂಗೊಂಡಿದ್ದು, ಕೂಡಲೇ ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ತುಮಕೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

