ಇನ್‌ಸ್ಟಾಗ್ರಾಮ್‌ನಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿ ಉಗ್ರನ ಜಾಲ!: ತುಮಕೂರು, ದಾವಣಗೆರೆ ಯುವಕರನ್ನು ಬಲಿಪಶು ಮಾಡಿದ ‘ರಾಣಾ’!

ತುಮಕೂರು: ಕರ್ನಾಟಕದಲ್ಲಿ ವಿದೇಶಿ ಭಯೋತ್ಪಾದಕ ಸಂಘಟನೆಗಳ ಜಾಲ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ಆಯಾಮವೊಂದು ಬಯಲಾಗಿದೆ. ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದುಕೊಂಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಯುವಕರನ್ನು ತುಮಕೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರನ್ನು ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (ಅಲ್ಲಾಬಕಾಶ್-24) ಮತ್ತು ದಾವಣಗೆರೆಯ ಬಿಡಿ ಲೇಔಟ್ ನಿವಾಸಿ ಜಮೀರ್ ಖಾನ್ (22) ಎಂದು ಗುರುತಿಸಲಾಗಿದೆ.

ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಇಬ್ಬರು ಯುವಕರು ಮತ್ತು ಪಾಕಿಸ್ತಾನದಲ್ಲಿದ್ದ ‘ರಾಣಾ’ ಎಂಬ ಹ್ಯಾಂಡ್ಲರ್ ನಡುವೆ ಇನ್‌ಸ್ಟಾಗ್ರಾಮ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುತ್ತಿದ್ದ ಆತಂಕಕಾರಿ ಸಂಭಾಷಣೆ ಹಾಗೂ ಚಾಟ್‌ಗಳನ್ನು ಪತ್ತೆಹಚ್ಚಿದ್ದರು. ಈ ಮಹತ್ವದ ಸುಳಿವಿನ ಆಧಾರದ ಮೇಲೆ ಎಚ್ಚೆತ್ತ ತುಮಕೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಹೆಡೆಮುರಿ ಕಟ್ಟಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಪಾಕಿಸ್ತಾನದ ಹ್ಯಾಂಡ್ಲರ್ ಈ ಯುವಕರ ತಲೆಗೆ ಕೋಮು ದ್ವೇಷ ಹಾಗೂ ಉಗ್ರತ್ವದ ಆಲೋಚನೆಗಳನ್ನು ತುಂಬಿ ಬ್ರೈನ್ ವಾಶ್ ಮಾಡಿದ್ದ. ಭಾರತದಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಹೆಚ್ಚಿನ ಯುವಕರನ್ನು ನೇಮಕ ಮಾಡಿಕೊಳ್ಳುವ (Recruitment) ನಿಟ್ಟಿನಲ್ಲಿ ಇವರು ಚರ್ಚೆ ನಡೆಸುತ್ತಿದ್ದರು ಎಂಬ ಆಘಾತಕಾರಿ ಸತ್ಯ ಪ್ರಕಟಣೆಯಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ:ಹಳೇ ಲವ್ವರ್ ಜೊತೆ ಕಾರಲ್ಲಿ ಸುತ್ತಾಡಿದ ಯುವತಿ; ರೊಚ್ಚಿಗೆದ್ದು ಪಟಾಲಂನೊಂದಿಗೆ ಬಂದು ಮುಗಿಸಲು ನೋಡಿದ ಹಾಲಿ ಪ್ರೇಮಿ!

ಬಂಧಿತರಿಂದ ಮೊಬೈಲ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಸದ್ಯ ತನಿಖೆ ಆರಂಭಿಕ ಹಂತದಲ್ಲಿದ್ದು, ಇವರೊಂದಿಗೆ ರಾಜ್ಯದ ಬೇರೆ ಯಾರಾದರೂ ಸಂಪರ್ಕದಲ್ಲಿದ್ದಾರೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು