ಉಡುಪಿ : ಜಿಲ್ಲೆಯ ಎಲ್ಲಾ ಖಾಸಗಿ ಬಸ್ಗಳಲ್ಲಿ ಕಡ್ಡಾಯವಾಗಿ ಬಾಗಿಲುಗಳನ್ನು ಅಳವಡಿಸುವ ಸಂಬಂಧ ನೀಡಲಾಗಿದ್ದ ಗಡುವನ್ನು ಜೂನ್ 1, 2026ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಉಪಸ್ಥಿತಿಯಲ್ಲಿ ನಡೆದ ಖಾಸಗಿ ಬಸ್ ಮಾಲೀಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಸ್ತುತ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಮಾರ್ಚ್ ವರೆಗೆ ನಡೆಯುವ ಪರೀಕ್ಷಾ ಅವಧಿ, ಜೊತೆಗೆ ಬಸ್ಗಳಲ್ಲಿ ಮಡಚುವ (ಫೋಲ್ಡಿಂಗ್) ಮಾದರಿಯ ಬಾಗಿಲುಗಳನ್ನು ಅಳವಡಿಸಲು ಅಗತ್ಯವಿರುವ ಗ್ಯಾರೇಜ್ಗಳ ಸಂಖ್ಯೆ ಸೀಮಿತವಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಹೆಚ್ಚುವರಿ ಕಾಲಾವಕಾಶ ನೀಡಿದೆ.

ಇದನ್ನೂ ಓದಿ : Cambodia : ಕಾಂಬೋಡಿಯದಲ್ಲಿ ಸಿಲುಕಿದ್ದ ಮಂಗಳೂರಿನ ಐವರ ರಕ್ಷಣೆ
ಸಭೆಯಲ್ಲಿ ಸುರಕ್ಷತಾ ನಿಯಮಗಳ ಪಾಲನೆ ಹಾಗೂ ಕಾರ್ಯಾಚರಣೆಯ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಎಲ್ಲಾ ಬಸ್ಗಳಲ್ಲಿ ಒಂದೇ ಸಮಯದಲ್ಲಿ ಬಾಗಿಲು ಅಳವಡಿಸುವುದು ಪ್ರಾಯೋಗಿಕವಾಗಿ ಕಷ್ಟಕರವಾಗಿದೆ ಎಂದು ಬಸ್ ಮಾಲೀಕರು ಹೆಚ್ಚಿನ ಸಮಯ ಕೋರಿದರು.
ಆದರೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ, ತಕ್ಷಣದಿಂದಲೇ ಫಿಟ್ನೆಸ್ ಪ್ರಮಾಣಪತ್ರ (ಎಫ್ಸಿ) ನವೀಕರಣವನ್ನು ಷರತ್ತಿನೊಂದಿಗೆ ಮಾತ್ರ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಜೂನ್ 1ರೊಳಗೆ ಕಡ್ಡಾಯ ಬಾಗಿಲು ಅಳವಡಿಸದ ಬಸ್ನ ಎಫ್ಸಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾಡಳಿತ ವಿಧಿಸಿದ ಷರತ್ತುಗಳಿಗೆ ಖಾಸಗಿ ಬಸ್ ಮಾಲೀಕರು ಏಕಮತದಿಂದ ಒಪ್ಪಿಗೆ ಸೂಚಿಸಿ, ನಿಗದಿತ ಅವಧಿಯೊಳಗೆ ಶೇ.100ರಷ್ಟು ಪಾಲನೆ ಮಾಡುವುದಾಗಿ ಭರವಸೆ ನೀಡಿದರು. ಗಡುವಿನ ನಂತರ ಬಾಗಿಲಿಲ್ಲದೆ ಸಂಚರಿಸುವ ಯಾವುದೇ ಬಸ್ಗಳನ್ನು ವಶಕ್ಕೆ ಪಡೆಯಲಾಗಿದರೂ ಅದಕ್ಕೆ ವಿರೋಧ ವ್ಯಕ್ತಪಡಿಸದೇ ಇರುವುದಾಗಿ ತಿಳಿಸಿದರು. ಈ ಕ್ರಮ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪುನರುಚ್ಚರಿಸಿ, ಗಡುವು ಮುಗಿದ ಬಳಿಕ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

