ಉಡುಪಿ: ಉಡುಪಿ ಜಿಲ್ಲೆಯ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ (NH-66) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ನಲ್ಲಿ ತೆರಳುತ್ತಿದ್ದ ಸ್ಥಳೀಯ ಆರ್ಎಸ್ಎಸ್ (RSS) ನಾಯಕ ಗುರುದಾಸ ಶೆಣೈ (Gurudas Shenoy) ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅತಿ ವೇಗವಾಗಿ ಬಂದ ಕಾರು ಸೈಕಲ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ಇಡೀ ಭೀಕರ ಘಟನೆಯ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ.
ಆರ್ಎಸ್ಎಸ್ ಸ್ಥಳೀಯ ಮುಖಂಡ ಗುರುದಾಸ ಶೆಣೈ ಅವರು ಬೆಳಗಿನ ಜಾವ ಸೈಕಲ್ನಲ್ಲಿ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯನ್ನು ದಾಟುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಕಾರು ಸೈಕಲ್ಗೆ ತೀವ್ರ ರಭಸದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಗುರುದಾಸ ಶೆಣೈ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಜೈಪುರ ಬಳಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; ಮೂವರು ದಾರುಣ ಸಾವು
ಢಿಕ್ಕಿ ಹೊಡೆದ ನಂತರ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಕಾರು ಚಾಲಕ ಪ್ರದೀಪ್ ಕಾಂಚನ್ (Pradeep Kanchan) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಕೋಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

