ಉಡುಪಿ: ನಿಯಂತ್ರಣ ತಪ್ಪಿ ಸ್ಕೂಟರ್ ದೈವಸ್ಥಾನದ ಗೋಡೆಗೆ ಡಿಕ್ಕಿ; ತಾಯಿ ಸಾವು, ಪುತ್ರನಿಗೆ ಗಂಭೀರ ಗಾಯ!

ಉಡುಪಿ: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಅಪ್ಪಳಿಸಿದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬರು ಮೃತಪಟ್ಟು, ಚಾಲನೆ ಮಾಡುತ್ತಿದ್ದ ಅವರ ಪುತ್ರ ಗಂಭೀರವಾಗಿ ಗಾಯಗೊಂಡಿರುವ ಮನಕಲಕುವ ಘಟನೆ ಶುಕ್ರವಾರ ಸಂಜೆ ನಿಟ್ಟೂರು ಸಮೀಪ ನಡೆದಿದೆ.ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಮೃತಪಟ್ಟ ದುರ್ದೈವಿ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ತೀವ್ರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ-ಮಗ ಸಂಚರಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆ ಬದಿಯ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ನಿಂದ ಎಸೆಯಲ್ಪಟ್ಟ ಹೆಲೆನ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಹಾದಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ಜಾಗ ಗುರುತಿಸಿ ಆಗಿದೆ, ಮೆಡಿಕಲ್‌ ಕಾಲೇಜು ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಘಟನೆಗೆ ಸಂಬಂಧಿಸಿದಂತೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ಅಜಾಗರೂಕತೆ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು