ಉಡುಪಿ: ಇಬ್ಬರ ವಿರುದ್ಧ ಗಡಿಪಾರು ಆದೇಶ ಹೊರಡಿಸಿದ ಪೊಲೀಸರು

udupi-police-externment-order-two-accused

ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸರು ಇಬ್ಬರ ವಿರುದ್ಧ ಗಡಿಪಾರು (Externment) ಆದೇಶ ಜಾರಿಗೊಳಿಸಿದೆ.

ಈ ಆದೇಶವನ್ನು ಮಾರ್ಚ್ 26ರಂದು ವಿಶೇಷ ಕಾರ್ಯನಿರ್ವಹಣಾಧಿಕಾರಿ ಮ್ಯಾಜಿಸ್ಟ್ರೇಟ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹೊರಡಿಸಿದ್ದಾರೆ.

Advertisement

ಕಾಪು ತಾಲೂಕಿನ ಕಲತ್ತೂರು ಸೂರ್ಯಗುಡ್ಡೆಯ ಮೊಹಮ್ಮದ್ ನೌಫಿಲ್ (ಶಿರ್ವಾ ಪೊಲೀಸ್ ಠಾಣೆ ವ್ಯಾಪ್ತಿ) ಹಾಗೂ ಮಲ್ಪೆ-ಕೊಡವೂರು ಗ್ರಾಮದ ಆಶೀರ್ವಾದ್ ನಿವಾಸಿ ಸುಹಾನ್ ಪೂಜಾರಿ (ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿ) ಗಡಿಪಾರಿಗೊಳಗಾದವರು.

ಇದನ್ನೂ ಓದಿ: ದಕ್ಷಿಣ ಕನ್ನಡ, ಉಡುಪಿ ಸೇರಿ 15 ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆ, ಯೆಲ್ಲೋ ಅಲರ್ಟ್

ಮೊಹಮ್ಮದ್ ನೌಫಿಲ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ಶಿರ್ವಾ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಸುಹಾನ್ ಪೂಜಾರಿ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ.

ಆದೇಶದ ಪ್ರಕಾರ, ಮೊಹಮ್ಮದ್ ನೌಫಿಲ್ ಅವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಗೆ ಹಾಗೂ ಸುಹಾನ್ ಪೂಜಾರಿ ಅವರನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಈ ಕ್ರಮವನ್ನು ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಹಾಗೂ ಸಾರ್ವಜನಿಕ ಸುರಕ್ಷತೆಗೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು