ಉಡುಪಿ: ವಿವಿಧ ನೆಪಗಳನ್ನು ಹೇಳಿಕೊಂಡು ಹಣ ವರ್ಗಾಯಿಸುವಂತೆ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸಂದೇಶ ಕಳುಹಿಸಿದ್ದಾರೆ. ಅಸಲಿಗೆ, ಈ ರೀತಿ ಸಂದೇಶ ಕಳುಹಿಸಿದ ಖಾತೆಯೇ ನಕಲಿಯಾಗಿದ್ದು, ಸೈಬರ್ ವಂಚಕರ ಬಲೆಗೆ ಬೀಳದಂತೆ ಜಿಲ್ಲಾಧಿಕಾರಿ ಸ್ವರೂಪ ಅವರು ಮನವಿ ಮಾಡಿದ್ದಾರೆ.
ತಮ್ಮ ಹೆಸರು ಮತ್ತು ಫೋಟೋ ಬಳಸಿಕೊಂಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಲಾಗಿದ್ದು, ಈ ಖಾತೆಯ ಮೂಲಕ ಹಣ ವರ್ಗಾವಣೆ ಕೋರಿ ಸಂದೇಶ ರವಾನಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಮತ್ತು ಸರ್ಕಾರಿ ಅಧಿಕಾರಿಗಳು ಎಚ್ಚರದಿಂದ ಇದ್ದು, ಸಂದೇಶ ಬಂದಲ್ಲಿ ಕಡೆಗಣಿಸುವಂತೆ ಕೋರಿದ್ದಾರೆ. ಅಲ್ಲದೆ, ಅಂತಹ ಸಂದೇಶಗಳು ಬಂದ ಕೂಡಲೇ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲು ಸೂಚಿಸಲಾಗುತ್ತದೆ.

ಇದನ್ನೂ ಓದಿ: Trending: ಆಪರೇಷನ್ ಸಿಂದೂರ ಕಾರ್ಯಾಚರಣೆ ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ
ನಕಲಿ ಖಾತೆ ಸೃಷ್ಟಿ ಸಂಬಂಧ ಉಡುಪಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಔಪಚಾರಿಕ ದೂರು ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಅವರು ಮಾಹಿತಿ ನೀಡಿದ್ದಾರೆ. ನಾಗರಿಕರು ಜಾಗರೂಕರಾಗಿರಬೇಕು ಮತ್ತು ಆನ್ಲೈನ್ ವಂಚನೆಗೆ ಬಲಿಯಾಗಬಾರದು ಎಂದು ಉಡುಪಿ ಜಿಲ್ಲಾಡಳಿತವು ಒತ್ತಾಯಿಸಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

