ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿರುವ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ದ್ದಾರೆ. ಅವಳಿಂದ ಸುಮಾರು 4 ಕೋ. ರೂ. ಮೌಲ್ಯದ 4 ಕೆಜಿ ಡ್ರಗ್ಸ್ ವಸ್ತು ವಶಪಡಿಸಿಕೊಂಡಿ ದ್ದಾರೆ.
ಬೆಂಗಳೂರಿನ ಹೊರವಲಯದ ಜಿಗಾನಿಯಲ್ಲಿ ಸಿಕ್ಕಿಬಿದಿದ್ದು, 4 ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ, ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ ಸುಮಾರು 4 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಈ ಬಂಧನದೊಂದಿಗೆ, ಮಂಗಳೂರಿಗೆ ಪ್ರಮುಖ ಮಾದಕವಸ್ತು ಪೂರೈಕೆ ಜಾಲವನ್ನು ಭೇದಿಸಲಾಗಿದೆ ಎಂದು ಖಚಿತಪಡಿಸಲಾಗಿದೆ.

