ಉಜ್ಜಯಿನಿ: ಸ್ವ ಘೋಷಿತ ಅಘೋರಿ ಮಂಗಳಮುಖಿಯೊಬ್ಬರು ಪವಿತ್ರ ಧಾರ್ಮಿಕ ನಗರಿ ಉಜ್ಜಯಿನಿಯ ಸ್ಮಶಾನವೊಂದರಲ್ಲಿ ಉರಿಯುತ್ತಿರುವ ಚಿತೆಯಿಂದ ಮಾನವನ ಮಾಂಸವನ್ನು ಹೊರತೆಗೆದು ಸೇವಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಅಸಹ್ಯಕ್ಕೆ ಕಾರಣವಾಗಿದೆ.
ನಂಬಿಕೆ, ಧರ್ಮ ಅಥವಾ ತಂತ್ರ-ಮಂತ್ರದ ಹೆಸರಿನಲ್ಲಿ ನಡೆದ ಈ ವಿಕೃತ ಕೃತ್ಯವು ಅತ್ಯಂತ ಅಮಾನವೀಯ, ವಿಕಾರ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತವಾಗಿದೆ. ಮೃತರ ಆತ್ಮದ ಗೌರವ ಹಾಗೂ ಅವರ ಕುಟುಂಬಸ್ಥರ ಭಾವನೆಗಳ ಜೊತೆ ಚೆಲ್ಲಾಟವಾಡುವ ಇಂತಹ ಅಮಾನವೀಯ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಹಾಗೂ ಧಾರ್ಮಿಕ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಸವಣಾಲು ಮತ್ತು ಅಚ್ಲಾಡಿಯಲ್ಲಿ ಬೋನಿಗೆ ಬಿದ್ದ ಚಿರತೆಗಳು: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
उज्जैन जैसे पवित्र धार्मिक नगर में श्मशान घाट पर जलती चिता से मानव मांस निकालकर खाने का वायरल वीडियो बेहद घृणित, अमानवीय और शर्मनाक है। आस्था, धर्म या तंत्र-मंत्र के नाम पर ऐसी वीभत्स हरकत किसी भी कीमत पर स्वीकार नहीं की जा सकती। मृतक की गरिमा और परिजनों की भावनाओं से खिलवाड़… pic.twitter.com/0t1wF68NYB
— Hansraj Meena (@HansrajMeena) September 1, 2026
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ದೃಶ್ಯಾವಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು, ಘಟನೆಯ ಕುರಿತು ತಕ್ಷಣವೇ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿವೆ. ಅಲ್ಲದೆ, ಇಂತಹ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಹಾಗೂ ಅವರಿಗೆ ಪ್ರೇರಣೆ ನೀಡಿದವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ದೂರುಗಳು ಕೇಳಿಬಂದಿವೆ. ಇದರ ಬೆನ್ನಲ್ಪೇ ಪೊಲೀಸರು ಮಾಂಸ ತಿಂದ ಮಂಗಳಮುಖಿಯನ್ನು ಬಂಧಿಸಿದ್ದಾರೆ.
ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

