ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಗುರುತು ಪತ್ತೆಗೆ ಪೊಲೀಸರ ಮನವಿ

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮೃತ ವ್ಯಕ್ತಿಯು ಅಂದಾಜು 35 ರಿಂದ 45 ವರ್ಷ ವಯಸ್ಸಿನವರಾಗಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವು ಬಿಳಿ ಬಣ್ಣದ ತುಂಬು ತೋಳಿನ ಅಂಗಿ (Full Sleeves Shirt) ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದೆ. ವಿಶೇಷವಾಗಿ ವ್ಯಕ್ತಿಯ ಬಲಗೈಯಲ್ಲಿ ಕೆಂಪು ದಾರ ಇರುವುದು ಪತ್ತೆಯಾಗಿದೆ.

Advertisement

ಇದನ್ನೂ ಓದಿ: ಬೆಳಗಾವಿ: ಸ್ಕಿಪ್ಪಿಂಗ್ ಹಗ್ಗ ತೆಗೆಯಲು ಹೋಗಿ ವಿದ್ಯುತ್ ಅವಘಡಕ್ಕೆ ಬಲಿಯಾದ 9 ವರ್ಷದ ಬಾಲಕಿ!

ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಚಹರೆಯುಳ್ಳ ವ್ಯಕ್ತಿ ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ಅಥವಾ ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ, ಕೂಡಲೇ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹದ ಗುರುತು ಪತ್ತೆ ಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *