ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್: ವಿಶೇಷ ಪೂಜೆ ಸಲ್ಲಿಸಿದ ಹಣಕಾಸು ಸಚಿವೆ!

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿ ಜಿಲ್ಲೆಯ ವಿಶ್ವವಿಖ್ಯಾತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಸಚಿವರಿಗೆ ದೇವಾಲಯದ ಆಡಳಿತ ಮಂಡಳಿ ಮತ್ತು ಅರ್ಚಕರು ಆತ್ಮೀಯವಾಗಿ ಸ್ವಾಗತಿಸಿದರು. ಮೂಕಾಂಬಿಕೆ ದೇವಿಯ ದರ್ಶನ ಪಡೆದ ಸಚಿವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ದರ್ಶನದ ನಂತರ ದೇವಾಲಯದ ವಾಸ್ತುಶಿಲ್ಪ ಮತ್ತು ಆವರಣವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ದೇವಾಲಯದ ಮುಂಭಾಗದ ಗರುಡಗಂಭದ ಬಳಿ ಸಚಿವರು ದೇವಾಲಯದ ಅರ್ಚಕರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು. ಸಚಿವರ ಭೇಟಿಯ ನೆನಪಿಗಾಗಿ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಅವರನ್ನು ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭೀಕರ ಅಗ್ನಿ ಅವಘಡ; ವಾಣಿಜ್ಯ ಸಂಕೀರ್ಣದ ಅಂಗಡಿಗಳು ಭಸ್ಮ, ಲಕ್ಷಾಂತರ ಹಾನಿ!

ಕೇಂದ್ರ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು