ಲಖನೌ: ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಾಜ್ಯದ ಬಡ ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಭಾರಿ ಬಂಪರ್ ಕೊಡುಗೆ ಪ್ರಕಟಿಸಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (PM Ujjwala Yojana) ಅಡಿಯಲ್ಲಿ ರಾಜ್ಯದ ಕೋಟ್ಯಾಂತರ ಕುಟುಂಬಗಳಿಗೆ ಉಚಿತ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ವಿತರಿಸಲು ಸರ್ಕಾರ ಮುಂದಾಗಿದೆ.
ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಯೋಗಿ ಸರ್ಕಾರವು ₹1,500 ಕೋಟಿ ರೂಪಾಯಿಗಳ ಬೃಹತ್ ಸಬ್ಸಿಡಿ ಮೊತ್ತವನ್ನು ಬಿಡುಗಡೆ ಮಾಡಿದೆ. ಉಜ್ಜಲ ಯೋಜನೆಯ ಲಾಭ ಪಡೆಯುತ್ತಿರುವ ರಾಜ್ಯದ 1.89 ಕೋಟಿ ಅರ್ಹ ಕುಟುಂಬಗಳಿಗೆ ಈ ದೀಪಾವಳಿ ವಿಶೇಷ ಉಡುಗೊರೆ ಸಿಗಲಿದೆ.
ಉಚಿತ ಸಿಲಿಂಡರ್ ಪಡೆಯಲು ಸರ್ಕಾರ ನಿಗದಿಪಡಿಸಿರುವ ಸಬ್ಸಿಡಿ ಹಣವನ್ನು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಹಬ್ಬದ ಸಂದರ್ಭದಲ್ಲೇ ಹಣಕಾಸಿನ ನೆರವು ನೇರವಾಗಿ ಖಾತೆಗೆ ತಲುಪುತ್ತಿರುವುದರಿಂದ ಹಬ್ಬದ ಸಂಭ್ರಮ ದುಪ್ಪಟ್ಟಾಗಿದ್ದು, ಯೋಗಿ ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ: ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಲು ಮೋದಿ ಸರ್ಕಾರ ಮುಂದು: ‘ಖೇಸೆಗೆ ಕನ್ನ’ ಎಂದು ಎಐಸಿಸಿ ನಾಯಕರ ತೀವ್ರ ವಾಗ್ದಾಳಿ
ಉತ್ತರಪ್ರದೇಶ ಸರ್ಕಾರದ ಈ ಜನಪ್ರಿಯ ಯೋಜನೆಯಿಂದಾಗಿ ಲಕ್ಷಾಂತರ ಬಡ ಕುಟುಂಬಗಳ ಮನೆಗಳಲ್ಲಿ ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಉಚಿತ ಸಿಲಿಂಡರ್ ಬೆಳಗಲಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

