Breaking News

ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನದಂದು ದೇವಸ್ಥಾನದ ಆವರಣದಲ್ಲಿ ಪ್ರೇಮಿಗಳ ಅಸಭ್ಯ ವರ್ತನೆ

Valentine's Day Indecent behavior of lovers in the premises of Sri Bhog Nandeshwara Temple Chikkaballapura

ಚಿಕ್ಕಬಳ್ಳಾಪುರ: ಭಕ್ತಿಯಿಂದ ಬಂದು ದೇವರ ದರ್ಶನ ಪಡೆಯುವ ಪವಿತ್ರ ದೇವಸ್ಥಾನದಲ್ಲಿ ಕೆಲವು ಜೋಡಿಗಳು ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ.

ಪ್ರೇಮಿಗಳ ದಿನದಂದು ದೇವಾಲಯದ ಸಾಲು ಮಂಟಪಗಳಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ಗಳಲ್ಲಿ ಸೆರೆಹಿಡಿದ್ದಾರೆ.

Advertisement

ಇದನ್ನೂ ಓದಿ: ನೆಲಮಂಗಲದಲ್ಲಿ ಕೆಎಸ್‌ಆರ್‌ಟಿಸಿ-ಕಾರು ನಡುವೆ ಭೀಕರ ಅಪಘಾತ; ಐವರು ಸಾವು

ಪ್ರೇಮಿಗಳ ದಿನಾಚರಣೆ ದಿನವಾದ ಫೆ.14 ರಂದು ನಂದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆ ಹಲವರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಸಭ್ಯವಾಗಿ ವರ್ತಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ ಅಲ್ಲಿಂದ ಕಳಿಸಿದ್ದಾರೆ. ಅಲ್ಲದೆ, ದೇವಸ್ಥಾನದ ಪಾವಿತ್ರ್ಯ ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು