ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಕಾಲೇಜಿನ ವಾಸವಿ ಹಾಗೂ ಭೂಷಣ್ ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಟಾಪರ್!

ಬಂಟ್ವಾಳ: ಇಂದು ಪ್ರಕಟವಾದ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ (Science Stream) ವಿದ್ಯಾರ್ಥಿನಿ ವಾಸವಿ ಹಾಗೂ ವಿದ್ಯಾರ್ಥಿ ಭೂಷಣ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಇಬ್ಬರು ಕೂಡ ಒಟ್ಟು 600ಕ್ಕೆ 593 ಅಂಕಗಳನ್ನು ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಉನ್ನತ ಸ್ಥಾನ ತಂದುಕೊಟ್ಟಿದ್ದಾರೆ.ಇವರು ಒಟ್ಟು ಶೇ. 98.8ರಷ್ಟು ಅಂಕಗಳನ್ನು ಪಡೆಯುವ ಮೂಲಕ ವಿಜ್ಞಾನ ವಿಭಾಗದ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಶ್ರೀರಾಮ ಪಿಯು ಕಾಲೇಜಿನ ಪ್ರಿತೇಶ್ ದ್ವಿತೀಯ ಪಿಯುಸಿಯಲ್ಲಿ ಜಿಲ್ಲಾ ಮಟ್ಟದ ಸಾಧನೆ!

ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರವು ಪ್ರತಿ ವರ್ಷದಂತೆ ಈ ಬಾರಿಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ವಾಸವಿ ಹಾಗೂ ಭೂಷಣ್ ಅವರ ಈ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು