ಉತ್ತರ ಪ್ರದೇಶ, ಫೆ. 10; ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆಯನ್ನು ಕೆಲವು ಮುಸ್ಲಿಂ ಮಹಿಳೆಯರು ಕೆಡವಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ದೇವಸ್ಥಾನದ ನಿರ್ಮಾಣವಾಗುತ್ತಿದ್ದ ಜಾಗಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಜಾಗದ ವಿವಾದ (Land Dispute) ಇತ್ತು ಎನ್ನಲಾಗಿದೆ. ಈ ಜಾಗವು ತಮಗೆ ಸೇರಿದ್ದೆಂದು ವಾದಿಸಿ ಕೆಲವು ಮಹಿಳೆಯರು ನಿರ್ಮಾಣ ಹಂತದಲ್ಲಿದ್ದ ಗೋಡೆಯನ್ನು ಕೆಡವಲು ಯತ್ನಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆಯು ಕೋಮು ಬಣ್ಣ ಪಡೆದುಕೊಳ್ಳದಂತೆ ತಡೆಯಲು ಆ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುದ್ದು, ಶಾಂತಿ ಕಾಪಾಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ವಿಡಿಯೋ ಇಲ್ಲಿದೆ:
Big Breaking 🚨
3 Muslim women destroyed hindu temple construction in Pratapgarh, Uttar PradeshHope Yogi ji will give them special treatment pic.twitter.com/VYo68ocY9d
— Voice of Hindus (@Warlock_Shubh) February 10, 2026
ಆ ಜಾಗವು ಕಾನೂನುಬದ್ಧವಾಗಿ ಯಾರಿಗೆ ಸೇರಿದ್ದು ಮತ್ತು ದೇವಸ್ಥಾನ ನಿರ್ಮಾಣಕ್ಕೆ ಅಧಿಕೃತ ಅನುಮತಿ ಇತ್ತೇ ಎಂಬ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

