ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಯೋಗೀಶ್ ಗೌಡ ಕೊಲೆ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆ! ಶಾಸಕ ಸ್ಥಾನವೂ ಪತರುಗುಟ್ಟಿ ಹೋಗುವ ಭೀತಿ

ಬೆಂಗಳೂರು: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ದೋಷಿ ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.ಜೂನ್ 15, 2016 ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಜಿಮ್‌ನಲ್ಲಿ ಯೋಗೀಶ್ ಗೌಡ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಮೊದಲು ಸ್ಥಳೀಯ ಪೊಲೀಸರು ನಡೆಸಿದ್ದರು. ನಂತರ 2019 ರಲ್ಲಿ ಪ್ರಕರಣವನ್ನು ಸಿಬಿಐ (CBI) ಗೆ ವಹಿಸಲಾಯಿತು. ಸಿಬಿಐ ತನಿಖೆಯ ವೇಳೆ ವಿನಯ್ ಕುಲಕರ್ಣಿ ಅವರ ಪಾತ್ರವಿರುವುದು ದೃಢಪಟ್ಟಿತ್ತು. 2020 ರ ನವೆಂಬರ್‌ನಲ್ಲಿ ಸಿಬಿಐ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಸುಮಾರು ಒಂಬತ್ತು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಅವರು ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Advertisement

ಇದನ್ನೂ ಓದಿ; ಯಾದಗಿರಿಯಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಬೆಂಕಿಗಾಹುತಿಯಾದ 6 ಮಂದಿ!

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಇಂದು ಶಿಕ್ಷೆ ಪ್ರಕಟಿಸಿದ್ದಾರೆ. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಈ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಈಗ ಕುತ್ತು ಬಂದಿದೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು