ಬೆಂಗಳೂರು: ಕರ್ತವ್ಯದ ಅವಧಿಯಲ್ಲಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರಿಗೆ ಸಂಕಷ್ಟ ಹೆಚ್ಚಾಗಿದೆ. ವೈರಲ್ ಆಗಿದ್ದ ವಿಡಿಯೋಗಳು ಕೃತಕ ಬುದ್ಧಿಮತ್ತೆ (AI) ಸೃಷ್ಟಿಯಲ್ಲ, ಅವು ಸಂಪೂರ್ಣವಾಗಿ ಅಸಲಿ ಎಂದು ತನಿಖಾ ತಂಡ ಸ್ಪಷ್ಟಪಡಿಸಿದೆ.
ಎಡಿಜಿಪಿ ಆರ್. ಹಿತೇಂದ್ರ ನೇತೃತ್ವದ ನಾಲ್ವರು ಐಪಿಎಸ್ ಅಧಿಕಾರಿಗಳ ತಂಡವು ಈ ಪ್ರಕರಣದ ಕುರಿತು ಕೂಲಂಕಷ ತನಿಖೆ ನಡೆಸಿ 100 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.ವಿವಾದಿತ ವಿಡಿಯೋವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವಿಡಿಯೋದಲ್ಲಿ ಯಾವುದೇ ತಾಂತ್ರಿಕ ಮಾರ್ಪಾಡು, ಎಡಿಟಿಂಗ್ ಅಥವಾ ಎಐ ತಂತ್ರಜ್ಞಾನ ಬಳಕೆಯಾಗಿಲ್ಲ ಎಂದು ತಜ್ಞರು ವರದಿ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆ್ಯಂಬ್ಯುಲೆನ್ಸ್ ಹಾಗೂ ಕಾರು ನಡುವೆ ಡಿಕ್ಕಿ
ರಾಮಚಂದ್ರ ರಾವ್ ಅವರು 2016-17ರಲ್ಲಿ ಬೆಳಗಾವಿ ವಲಯದ ಐಜಿಪಿಯಾಗಿದ್ದಾಗ ಅವರ ಕಚೇರಿಯಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಹಿಳೆಯೊಬ್ಬರು ಇದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದರು.ವಿಡಿಯೋದಲ್ಲಿರುವ ಇಬ್ಬರು ಮಹಿಳೆಯರು ಸದ್ಯ ತನಿಖಾ ತಂಡಕ್ಕೆ ಲಭ್ಯವಾಗುತ್ತಿಲ್ಲ. ಅವರ ಹೇಳಿಕೆ ದಾಖಲಿಸುವುದು ಪ್ರಕರಣದ ಮುಂದಿನ ಹಂತಕ್ಕೆ ಅತ್ಯಂತ ಪ್ರಮುಖವಾಗಿದೆ.ಹಿರಿಯ ಅಧಿಕಾರಿಗಳ ವರದಿಯ ಆಧಾರದ ಮೇಲೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ರಾವ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅಧಿಕೃತ ಶಿಸ್ತು ಕ್ರಮದ ಪ್ರಕ್ರಿಯೆ ಚುರುಕುಗೊಂಡಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

