ಪ್ರಧಾನಿ ಮೋದಿಯನ್ನು ರಿಸೆಪ್ಷನ್‌ಗೆ ಆಹ್ವಾನಿಸಿದ ವಿರೋಶ್ ಜೋಡಿ

ನವದೆಹಲಿ: ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೆ ಜಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಮಾ.4 ರಂದು ರಿಸಿಪ್ಷನ್ ನಡೆಯಲಿದೆ. ಈ ಹಿನ್ನಲೆ ದೆಹಲಿಗೆ ಆಗಮಿಸಿದ ನವ ಜೋಡಿ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೆಕ ಗಣ್ಯರನ್ನು ಆಹ್ವಾನಿಸಿದ್ದಾರೆ.

ಮೋದಿಯವರು ಮದುವೆಗೆ ಮುಂಚೆಯೇ ಪತ್ರ ಮುಖೇನ ಶುಭಾಶಯ ತಿಳಿಸಿದ್ದರು. ವಿಜಯ್ ಅವರ ತಂದೆ ಬರೆದಿದ್ದ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಅವರು ಪತ್ರ ಬರೆದು ವಧು-ವರರಿಗೆ ಶುಭಕೋರಿದ್ದರು.

ಇದನ್ನೂ ಓದಿ: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿ ದಾಳಿ

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮಾರ್ಚ್ 04 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಇದೇ ಸಂದರ್ಭ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕರೊಂಡ ಅವರುಗಳು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನೂ ಸಹ ಭೇಟಿ ಆಗಿದ್ದು, ಅವರನ್ನೂ ಸಹ ಮಾರ್ಚ್ 04 ರಂದು ನಡೆಯಲಿರುವ ಆರತಕ್ಷತೆಗೆ ಆಹ್ವಾನಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು